
ಚಾಮರಾಜನಗರ: ನಗರದ ಸಮೀಪ ಇರುವ ಮರಿಯಾಲದ ಬಸವರಾಜೇಂದ್ರ ನರ್ಸಿಂಗ್ ಕಾಲೇಜಿನಲ್ಲಿ ಇಂದು ನಡೆದ ರಾಷ್ಟ್ರೀಯ ದತ್ತು ಮಾಸಾಚರಣೆ ಕುರಿತ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಈಶ್ವರ್ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಕುರಿತ ಅರಿವು ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಬಸವರಾಜೇಂದ್ರ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಬಸವರಾಜೇಂದ್ರ, ಪ್ರಾಂಶುಪಾಲ ಮಂಜುನಾಥ.ಎನ್ ಸೇರಿದಂತೆ ಇತರರಿದ್ದರು.
ವರದಿ : ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ