ಇತ್ತೀಚಿನ ಸುದ್ದಿ
ನಂಜನಗೂಡು ಚಿಕ್ಕ ಜಾತ್ರಾ ಮಹೋತ್ಸವ-2024

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ 2024
ದಿನಾಂಕ 14-11-2024 ರಂದು ಗುರುವಾರ ಸಂಜೆ 7 ಗಂಟೆಗೆ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀಕಂಠ ಮುಡಿ ಉತ್ಸವ
17-11-2024 ರಂದು ಭಾನುವಾರ ಬೆಳಿಗ್ಗೆ 10-45 ರಿಂದ 11-30 ಗಂಟೆಯೊಳಗೆ ಸಲ್ಲುವ ಶುಭ ಲಗ್ನದಲ್ಲಿ ಶ್ರೀ ಮನ್ಮಹಾ ರಥಾರೋಹಣ
19-11-2024 ರಂದು ಮಂಗಳವಾರ ಸಂಜೆ 7 ಗಂಟೆಗೆ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯವರ ತೆಪ್ಪೋತ್ಸವ ಜರುಗಲಿದೆ.
ನಂಜನಗೂಡು ಚಿಕ್ಕ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಮೂಹ ಕುಟುಂಬ ಸಮೇತ ಆಗಮಿಸಿ ಶ್ರೀ ನಂಜುಂಡೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.
ಸ್ವಾಗತ ಕೋರುವವರು : ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಆಡಳಿತ ವರ್ಗ ನಂಜನಗೂಡು