ರಾಜ್ಯಸುದ್ದಿ

ರಾಯಚೂರು ಜಿಲ್ಲೆಯಾದ್ಯಂತ ನವೆಂಬರ್‍ 1ರಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ.

ರಾಯಚೂರು : ನವೆಂಬರ್‍ 1ರಿಂದ ರಾಯಚೂರು ಜಿಲ್ಲೆಯಲ್ಲಿ ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ಹೆಲ್ಮೆಟ್ ಧರಿಸಬೇಕು. (Helmet Compulsory )ಇಲ್ಲದಿದ್ದರೆ ದಂಡ ಬೀಳೂದು ಗ್ಯಾರಂಟಿ.


ರಾಯಚೂರು ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದರಲ್ಲೂ ಹೆಚ್ಚಾಗಿ ಬೈಕ್ ಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ. ಇನ್ನು ರಾಜ್ಯದಲ್ಲಿ ಈಗಾಗಲೇ ಎಲ್ಲಾ ಕಡೆಗಳಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದ್ದು, ಆದರೆ ರಾಯಚೂರಿನಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಹೆಲ್ಮೆಟ್ ಕಡ್ಡಾಯದ ನಿಯಮ ಅಷ್ಟು ಕಟ್ಟುನಿಟ್ಟಾಗಿ ಜಾರಿಗೆ ತಂದಿರಲಿಲ್ಲ ಆದರೆ ರಾಯಚೂರು ನಗರ ಸೇರಿದಂತೆ ಜಿಲ್ಲಾದ್ಯಂತ ಬೈಕ್‍ ಗಳ ಅಪಘಾತ ಸಂಖ್ಯೆ ಹೆಚ್ಚಾಗಿ ಸಾವು ನೋವುಗಳ ಸಂಖ್ಯೆಯೂ ಅಧಿಕವಾಗುತ್ತಿದ್ದರಿಂದ ಇದರಿಂದ ಅಪಘಾತದಲ್ಲಿ ಉಂಟಾಗುವ ಸಾವು ನೋವುಗಳ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಧ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿದೆ.

ಇಡೀ ದೇಶದಲ್ಲಿ ಸಂಭವಿಸುತ್ತಿರುವ ಅಪಘಾತಗಳಲ್ಲಿ ಬೈಕ್‌ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಹೆಲ್ಮೆಟ್‌ಧರಿಸದೆ ಇರುವುದು ಇದಕ್ಕೆ ಮುಖ್ಯ ಕಾರಣ. ಅಪಘಾತಗಳಲ್ಲಿ ಸಾವು ನೋವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶಕ್ಕಾಗಿ ( Helmet Compulsory)ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.

ನವೆಂಬರ್ 1ರಿಂದ ಹೆಲ್ಮೆಟ್ ಕಡ್ಡಾಯ :
ರಾಯಚೂರು ನಗರ ಸೇರಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ನವೆಂಬರ್ 1ರಿಂದ ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡೇ ಬೈಕ್ ಚಾಲನೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಪುಟ್ಟಮಾದಯ್ಯ ಈಗಾಗಲೇ ಆದೇಶ ಹೊರಡಿಸಿದ್ದಾರೆ.

ವರದಿ : ಮುಸ್ತಾಫಾ tv8kannada ಲಿಂಗಸುಗೂರು

Related Articles

Leave a Reply

Your email address will not be published. Required fields are marked *

Back to top button