ಇತ್ತೀಚಿನ ಸುದ್ದಿ

ಬಿರ್ಸಾ ಮುಂಡಾ ಪುತ್ಥಳಿ ಸ್ಥಾಪನೆಗೆ ಶಾಸಕ ಎಂ.ಆರ್.ಮಂಜುನಾಥ್‌‌ ಸಲಹೆ

ಚಾಮರಾಜನಗರ : ಬುಡಕಟ್ಟು ಸಮಾಜದ ಹೋರಾಟಗಾರ ಬಿರ್ಸಾ ಮುಂಡಾ ಅವರ ಪುತ್ಥಳಿಯನ್ನು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಬೇಕೆಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ನಗರದ ಜೆಎಚ್ ಪಟೇಲ್ ಸಭಾಂಗಣದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ ಹಾಗೂ ಜಿ.ಪಂ. ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಿಸಾ೯ಮುಂಡಾ ಜಯಂತಿ ಮಹೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸ್ವತಂತ್ರ ಪೂರ್ವದಲ್ಲಿ ಬ್ರಿಟಿಷರಿಂದ ಬುಡಕಟ್ಟು ಜನರಿಗೆ ನಡೆಯುತ್ತಿದ್ದ ದೌರ್ಜನ್ಯ ತಡೆಯಲು ಬಿರ್ಸಾಮುಂಡಾ ಹಲವು ಬಾರಿ ಹೋರಾಟ ನಡೆಸುವ ಮೂಲಕ ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಈ ಬುಡಕಟ್ಟು ಸಮಾಜ ಆರ್ಥಿಕ,ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಎಲ್ಲರೂ ಸಂಘಟಿತರಾಗಬೇಕೆಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಗಿರಿಜನ ಹಾಡಿಗಳಲ್ಲಿ ಮಧ್ಯದ ಹಾವಳಿ ಹೆಚ್ಚಾಗಿದ್ದು, ಚಿಕ್ಕ ವಯಸ್ಸಿನಲ್ಲೇ ಕೆಲವರು ಸಾವನ್ನಪ್ಪುತ್ತಿದ್ದಾರೆ ಇದನ್ನು ತಡೆಗಟ್ಟಲು ಕ್ರಮವಹಿಸಬೇಕು ಅಲ್ಲದೆ ಈ ಸಮಾಜಕ್ಕೆ ಒಳಮಿಸಲಾತಿ ಅಗತ್ಯವಿದ್ದು, ಹೋರಾಟ ಮಾಡುವಂತೆ ತಿಳಿಸಿದರು. ಗಿರಿಜನ ಹಾಡಿಗಳಲ್ಲಿ ವಿದ್ಯುತ್ ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆಯಿಂದ ಅಡ್ಡಿಯಾಗಿದೆ ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮವಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಡ ಅಧ್ಯಕ್ಷ ಪಿ‌.ಮರಿಸ್ವಾಮಿ,ಚುಡಾ ಅಧ್ಯಕ್ಷ ಮಹಮ್ಮದ್ ಅಜ್ಗರ್ , ನಗರಸಭೆ ಅಧ್ಯಕ್ಷ ಸುರೇಶ್ , ಉಪಾಧ್ಯಕ್ಷೆ ಮಮತಾ, ಜಿ.ಪಂ.ಸಿಇಒ ಮೋನಾ ರೋತ್,ಎಸ್ ಪಿ ಡಾ.ಬಿ.ಟಿ ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ,ಜಿ.ಪಂ.ಮಾಜಿ ಉಪಾಧ್ಯಕ್ಷಿ ಕೇತಮ್ಮ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಡಾ.ಎನ್ ಮಹದೇವಸ್ವಾಮಿ ಭಾರತದಲ್ಲಿ ಉಪಸ್ಥಿತರಿದ್ದರು.

ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ

Related Articles

Leave a Reply

Your email address will not be published. Required fields are marked *

Back to top button