ಅನ್ನಸಂತರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ

ನಂಜನಗೂಡು: ನಂಜನಗೂಡು ನಗರದ ಹುಲ್ಲಹಳ್ಳಿ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಂಭಾಗದಲ್ಲಿ ಶ್ರೀ ಶನೇಶ್ವರ ಗೂಡ್ಸ್ ಸರಕು ಸಾಗಾಣಿಕೆ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಹಾಗೂ ಮಾಜಿ ಜಿಪಂ ಸದಸ್ಯ ಚಿಕ್ಕರಂಗನಾಯಕ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು 2 ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದೆ. ಇತರೆ ಭಾಷೆಗಳಿಗೆ ಹೋಲಿಸಿದರೆ ಭಾಷೆಯು ಉತ್ಕಷ್ಟತೆಯನ್ನು ಪಡೆದಿದ್ದು, ಹೆಗ್ಗಳಿಕೆಯನ್ನು ಗಳಿಸಿದೆ. ಹಾಗಾಗಿ ಕರ್ನಾಟದಲ್ಲಿ ಕನ್ನಡಿಗರೇ ಸಾರ್ವಭೌಮರು. ಈ ದಿಸೆಯಲ್ಲಿ ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಆಟೋ ಚಾಲಕರು ಹೆಚ್ಚಿನ ಒತ್ತು ನೀಡಿರುವುದು ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಆಟೋ ಚಾಲಕರ ಸಂಘದ ಸದಸ್ಯರು ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಿ ಸಿಹಿ ಹಂಚುವ ಮೂಲಕ ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ದೇವನೂರು ಗ್ರಾಪಂ ಮಾಜಿ ಉಪಾಧ್ಯಕ್ಷ ರವಿ, ಶ್ರೀ ಶನೇಶ್ವರ ಗೂಡ್ಸ್ ಸರಕು ಸಾಗಾಣಿಕೆ ಆಟೋ ಚಾಲಕರ ಸಂಘದ ಅಧ್ಯಕ್ಷ ಸಿಂಧುವಳ್ಳಿ ವೇಣುಗೋಪಾಲ್, ಉಪಾಧ್ಯಕ್ಷ ರವೀಂದ್ರನ್, ಕಾರ್ಯದರ್ಶಿಗಳಾದ ಮಹದೇವ್, ರಾಜೇಶ್ ನಿರ್ದೇಶಕರಾದ ಭರತ್, ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ರಾಜೇಶ್, ಖಜಾಂಚಿ ರಮೇಶ್, ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ ಸೇರಿದಂತೆ ಸಕಘದ ಪದಾಧಿಕಾರಿಗಳು ಹಾಜರಿದ್ದರು.