ರಾಜ್ಯ

ಪುರುಷರಿಗೆ ಉಚಿತ ಬಸ್‌ ಪ್ರಯಾಣ: ಪ್ರಸ್ತಾವವಿಲ್ಲ ಸಚಿವ ರಾಮಲಿಂಗಾರೆಡ್ಡಿ,

ಹುಬ್ಬಳ್ಳಿ : ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಂವಾದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅವರನ್ನು ಭೇಟಿ ಮಾಡಿದಾಗ ಈ ಕುರಿತು ವಿಚಾರಿಸುತ್ತೇನೆ ಎಂದರು.

ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಹಿಂದೆ ಕಾಂಗ್ರೆಸ್ ಮುಖಂಡರೇ ಇದ್ದಾರೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಬಿಜೆಪಿ ಅಂದರೆ ಬುರುಡೆ ಜನತಾ ಪಕ್ಷ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದು ಹೇಗೆ ? ದೇಶದಲ್ಲಿ ಕಾಂಗ್ರೆಸ್‌ನ 214 ಸೇರಿ ಬೇರೆ ಬೇರೆ ಪಕ್ಷಗಳ 450 ಶಾಸಕರನ್ನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದರು.

Related Articles

Leave a Reply

Your email address will not be published. Required fields are marked *

Back to top button