ದೇಶ
ನ.25 ರಿಂದ ಡಿ.20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ಹೊಸ ದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ.
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ನವೆಂಬರ್ 26 ಸಂವಿಧಾನ ದಿನವಾಗಿದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಅಧಿವೇಶನದ ಎರಡನೇ ದಿನದಂದು ನವೆಂಬರ್ 26 ರಂದು ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಕಿರಣ್ ರಿಜಿಜು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮಹಾರಾಷ್ಟ್ರ ಮತ್ತು ಜಾಖರ್ಂಡ್ ವಿಧಾನಸಭೆ ಚುನಾವಣೆ
ನಂತರ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ವಕ್ಸ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಸಹ ಈ ಅಧಿವೇಶನದಲ್ಲಿ ಪರಿಚಯಿಸುವ ಸಾಧ್ಯತೆಯಿದೆ.