ಸುದ್ದಿ

ಕ್ರೀಡೆಗಳು ಕ್ರೀಡಾಪಟುಗಳಿಗೆ ಆತ್ಮವಿಶ್ವಾಸ ತುಂಬುತ್ತದೆ:ರಾಜಣ್ಣ

ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷಚೇತನ ಮಕ್ಕಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ವಿಕಲಚೇತನರ ಮಾಜಿ ಆಯುಕ್ತ ರಾಜಣ್ಣ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಸಹಜವಾಗಿ ಕ್ರೀಡಾಪಟುಗಳಲ್ಲಿ ಆತ್ಮವಿಶ್ವಾಸ, ಆತ್ಮೀಯತೆ, ಬಾಂಧವ್ಯವನ್ನು ಉತ್ಸಾಹವನ್ನು ತುಂಬುತ್ತದೆ. ವಿಶೇಷ ಚೇತನ ಮಕ್ಕಳ ಎಲ್ಲಾ ರೀತಿಯ ಬೆಳವಣಿಗೆ ಹಾಗೂ ಮುಖ್ಯವಾಹಿನಿಗೆ ಬರಲು ಈ ಕ್ರೀಡಾಕೂಟ ಸಹಾಯಕವಾಗಿದೆ ಎಂದರು.

ವಿಶೇಷ ಚೇತನರನ್ನು ಸಮಾಜದಲ್ಲಿ ಎಲ್ಲರಂತೆ ಕಾಣಬೇಕು ಅಲ್ಲದೆ ಆತ್ಮವಿಶ್ವಾಸ ತುಂಬಬೇಕು ಅವರಿಗೆ ಕ್ರೀಡೆ, ಮನರಂಜನೆ ಅತ್ಯಗತ್ಯವಾಗಿದೆ. ಜಿಲ್ಲಾ ಮಟ್ಟದ ಈ ಕ್ರೀಡಾಕೂಟದಲ್ಲಿ ಎಲ್ಲರೂ ಭಾಗವಹಿಸಿ ಉತ್ತಮ ಸಾಧನೆ ಮಾಡಿ ಎಂದರು.

ಜಿಲ್ಲಾ ವಿಕಲಚೇತನ ಕ್ಷಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಕ್ಕಳು ಭಾಗವಹಿಸಿ ನಂತರ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿ ನಮ್ಮಜಿಲ್ಲೆಗೆ ಕೀರ್ತಿ ತರಬೇಕು ಎಂದರು.ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಕ್ರೀಡೆಯಲ್ಲಿ ಭಾಗವಹಿಸಲು ಧೈರ್ಯ ತುಂಬಬೇಕು ಎಂದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಮಲ್ಲಿಕಾರ್ಜುನ್ ದೈಹಿಕ ಶಿಕ್ಷಣಾಧಿಕಾರಿ ಶಂಕರ್, ದೈಹಿಕ ಪರಿವೀಕ್ಷಕರಾದ ಬಸವರಾಜು, ಕಾಂತರಾಜು,ಬಸವಣ್ಣ, ಚಿಕ್ಕಮಲ್ಲಪ್ಪ ಸೇರಿದಂತೆ ಇತರರು ಇದ್ದರು.

ವರದಿ:ಇರಸವಾಡಿ ಸಿದ್ದಪ್ಪಾಜಿ ಚಾಮರಾಜನಗರ

Related Articles

Leave a Reply

Your email address will not be published. Required fields are marked *

Back to top button