ಸುದ್ದಿ
ಹುಲ್ಲಹಳ್ಳಿಯ JSS ಪ್ರೌಢಶಾಲೆಯಲ್ಲಿ ವಸ್ತು ಪ್ರದರ್ಶನ

ನಂಜನಗೂಡು: ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತುಜೆಎಸ್ಎಸ್ ಕಾಲೇಜಿನ ಉಪನ್ಯಾಸಕ ಶಿವಕುಮಾರ್ ಮತ್ತು ಶಾಲೆಯ ಮುಖ್ಯ ಶಿಕ್ಷಕ ಮಹದೇವಸ್ವಾಮಿ ಉದ್ಘಾಟಿಸಿದರು.
ಜೆಎಸ್ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಎನ್. ಶೈಲಜಾ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಶಾಲೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ವಿವಿಧ ಮಾದರಿಯಲ್ಲಿ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಜ್ಞಾನಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.
ವಸ್ತು ಪ್ರದರ್ಶನವನ್ನು ಪೋಷಕರು ಮತ್ತು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವೀಕ್ಷಣೆ ಮಾಡಿದರು. ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ಭಾಗಿಯಾಗಿ ಸಕತ್ ಖುಷಿ ಪಟ್ಟಿದ್ದಾರೆ.