
ಚಾಮರಾಜನಗರ: ಕರ್ನಾಟಕ ರಾಜ್ಯದಲ್ಲಿ ನಡೆದ ಮೂರು ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಪಚ್ಚಪ್ಪ ವೃತ್ತದಲ್ಲಿ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.

ಇದೇ ವೇಳೆ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಕರ್ನಾಟಕ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ನಮ್ಮ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನರು ಈ ಬಾರಿಯೂ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ.ಅಲ್ಲದೆ ಇವುಗಳ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯ ಕಾರಣಕರ್ತರಾಗಿದ್ದಾರೆ.
ಈ ಸಂದರ್ಭದಲ್ಲಿ ಚೂಡಾ ಅಧ್ಯಕ್ಷ ಅಸ್ಗರ್ ಮುನ್ನಾ, ಮುಖಂಡರಾದ ರವಿಗೌಡ,ಸ್ವಾಮಿ, ನಂಜದೇವನಪುರ ಶೇಖರ್, ಉಮೇಶ್, ದಡದಹಳ್ಳಿ ಮೂರ್ತಿ, ನಾಗೇಂದ್ರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ