ಇತ್ತೀಚಿನ ಸುದ್ದಿ
ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ

ಹೊಸಕೋಟೆ: ತಾಲ್ಲೂಕಿನಾ ನಂದಗುಡಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ ಸ್ಥಳೀಯ ಶಾಸಕರ ಅನುದಾನ ಸೇರಿದಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿದ್ದಾರೆ.
ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಸೇರಿದಂತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ. ಇನ್ನೂ ನೆಲವಾಗಿಲು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ಸಂಜೀವಿನಿ ಸ್ವಸಹಾಯ ಕಟ್ಟಡ ಉದ್ಘಾಟನೆ ಮಾಡಿ ವಿವಿಧ ಸಂಘಗಳ ಪ್ರತಿನಿಧಿಗಳಿಗೆ ಚೆಕ್ ವಿತರಣೆ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಗ್ರಾಮೀಣ ಭಾಗದಲ್ಲಿ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡುವ ದೃಷ್ಟಿಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ನೆಲವಾಗಿಲು ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರಿಕರಣ ಮಾಡುವ ಭರವಸೆ ನೀಡಿದರು.