ದೇಶ
BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ CM ಸಿದ್ದರಾಮಯ್ಯ : ಹಲವು ಯೋಜನೆಗಳಿಗೆ ಅನುಮತಿ ಕೋರಿ ಮನವಿ ಸಲ್ಲಿಕೆ.!

ನವದೆಹಲಿ: ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವು ಯೋಜನೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ‘ ರೈತರಿಗೆ ನೀಡುವ ನಬಾರ್ಡ್ ಸಾಲ ಪ್ರಮಾಣ ಹೆಚ್ಚಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡುವುದು, 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಹಂಚಿಕೆ ಮಾಡುವುದು ಸೇರಿದಂತೆ ರಾಜ್ಯದ ಹಿತಾಸಕ್ತಿಯ ಹಲವು ವಿಚಾರಗಳನ್ನು ಒಳಗೊಂಡ ಮನವಿ ಪತ್ರವನ್ನು ನೀಡಿದರು.
https://x.com/siddaramaiah/status/1862395604170682716?ref_src=twsrc%5Etfw%7Ctwcamp%5Etweetembed%7Ctwterm%5E1862395604170682716%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F