ಇತ್ತೀಚಿನ ಸುದ್ದಿ

ಸಂವಿಧಾನ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಿ: ಸರಗೂರು ಶಿವಣ್ಣ

ಸರಗೂರು : ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರ ಶ್ರೀ ಮತ್ತು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆ’ ಎಂದು ವಿಧಾನ ಅದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಆಗ್ರಹಿಸಿದರು.


ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಗುರುವಾರ ದಂದು ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿ ಮಾತನಾಡಿದರು.

ಸಂವಿಧಾನ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಕೈಗೊಳ್ಳಬೇಕು. ಮನುವಾದಿಗಳ ಸಂಖ್ಯೆ ಹೆಚ್ಚದಂತೆ ನೋಡಿಕೊಳ್ಳಬೇಕು. ಮಠಗಳಲ್ಲಿ ಪಂಕ್ತಿಭೇದ ಮಾಡುವವರು ಪ್ರಜೆಗಳನ್ನು ಸಮಾನವಾಗಿ ಕಾಣುವುದಿಲ್ಲ. ಅಸ್ಪೃಶ್ಯತೆ ಪಾಲನೆ, ಮೌಢ್ಯ ಬಿತ್ತುವ ಸ್ವಾಮೀಜಿಗಳು ಸಂವಿಧಾನದ ವಿರುದ್ಧ ಮಾತನಾಡದಂತೆ ತಾಕೀತು ಮಾಡಬೇಕು’ ಎಂದು ಖಂಡಿಸಿದರು.


ಸಮಾಜ ಸುಧಾರಕರ ಆಶಯಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ ‘ಸರ್ವ ಧರ್ಮ, ಸಹಬಾಳ್ವೆ’ಯ ತಿರುಳಿರುವ ಸಂವಿಧಾನದ ಬದಲಾವಣೆಗೆ ಒತ್ತಾಯಿಸಿರುವ ಪೇಜಾವರ ಶ್ರೀಗಳು, ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷ್ಟಪಡಿಸಲಿ. ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಇದರ ಬದಲಾಗಿ ಪೇಜಾವರ ಅವರು ಯಾವ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ. ದಲಿತರು-ಶೂದ್ರರು ಶ್ರೇಷ್ಠತೆಯ ವ್ಯಸನಕ್ಕೆ ತಲೆಬಾಗಬೇಕೇ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೇ’ ಎಂದು ಪ್ರಶ್ನಿಸಿದ್ದರು.
ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಗುಪ್ತ ಕಾರ್ಯಸೂಚಿಯನ್ನೇ ಪೇಜಾವರ ಅವರು ಮುಂದುವರಿಸುತ್ತಿದ್ದಾರೆ. ದಲಿತ, ಹಿಂದುಳಿದ, ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ’ ಎಂದು ತಿಳಿಸಿದರು.
ಅಧ್ಯಕ್ಷ ಚನ್ನೀಪುರ ನಾಗರಾಜು, ಮಾತನಾಡಿ ಸಂವಿಧಾನ ಬದಲಾವಣೆಗಾಗಿ ಪೇಜಾವರ ಶ್ರೀಗಳು ಹಾಗೂ ಸಂಘ ಪರಿವಾರಕ್ಕೆ ನಿಷ್ಠರಾಗಿರುವ ಕೆಲವು ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ದುರದೃಷ್ಟಕರ. ಇದು ಸಂವಿಧಾನಕ್ಕೆ ಪರೋಕ್ಷವಾಗಿ ಹಾಕಿರುವ ಬೆದರಿಕೆ ಕೂಡ ಆಗಿದೆ’’ ಎಂದು ಅವರು ತಿಳಿಸಿದರು.


ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ನಮ್ಮ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸುತ್ತೇವೆ.


ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ. ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ.


ಸಂವಿಧಾನ ವಿರೋಧಿ ಸಂಘಟನೆ ಆರೆಸ್ಸೆಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಠೆಯ ಯತಿಗಳು ಬೀದಿಗಿಳಿದು ಮಾತನಾಡುತ್ತಿರುವುದಕ್ಕೂ ಸಂಬಂಧವಿದೆ. ಯಾರೇ ಬಂದರೂ ಸಂವಿಧಾನವನ್ನು ಬೆಂಬಲಿಸುತ್ತೇವೆ ಎಂದು ಬಂದರೂ ರಾಜ್ಯದಲ್ಲಿ ಅವರಿಗೆ ಉಳಿಗಾಲವಿಲ್ಲ.ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ ಅಂಬೇಡ್ಕರ್ ಟ್ರಸ್ಟ್ ಗೌರವಾಧ್ಯಕ್ಷ ಮನುಗನಹಳ್ಳಿ ತಿಮ್ಮಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ಧರಾಜು,ಕಸಾಪ ಪ್ರಧಾನ ಕಾರ್ಯದರ್ಶಿ ಗ್ರಾಮೀಣ ಮಹೇಶ್, ದಸಂಸ ಮುಖಂಡ ಲಂಕೆ ಲಕ್ಷ್ಮಣ್, ಇನ್ನೂ ಮುಖಂಡರು ಹಾಜರಿದ್ದರು.


ವರದಿ : ಹಾದನೂರು ಚಂದ್ರ tv8kannada ಸರಗೂರು

Related Articles

Leave a Reply

Your email address will not be published. Required fields are marked *

Back to top button