ಇತ್ತೀಚಿನ ಸುದ್ದಿ

ಸಂವಿಧಾನ ಸಮರ್ಪಣ ದಿನದ ಅಂಗವಾಗಿ ನಂಜನಗೂಡಿನಲ್ಲಿ ಜನಜಾಗೃತಿ ಸಮಾವೇಶ

ನಂಜನಗೂಡು: ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅನನ್ಯ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರಿಗೂ ಆದರ್ಶರಾಗಿದ್ದಾರೆ ಎಂದು ಸಾಹಿತಿ ಡಾ.ವಿಠ್ಠಲ ವಗ್ಗನ್ ಹೇಳಿದರು.

ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅಂಬೇಡ್ಕರ್ ಭವನದ ಹೊರ ಆವರಣದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಸಮರ್ಪಣ ದಿನದ ಅಂಗವಾಗಿ ಜನಜಾಗೃತಿ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಯಾವುದೇ ಮೂಲೆಯಲ್ಲಿ ನೆಲೆ ನಿಂತು ಸ್ವತಂತ್ರವಾಗಿ ಸ್ವಾಭಿಮಾನದಿಂದ ಜೀವಿಸಲು ಹಕ್ಕು ಕೊಟ್ಟಿರುವ ಬಾಬಾ ಸಾಹೇಬ ಆದರ್ಶಪ್ರಾಯರು. ಅವರು ದಲಿತರಿಗೆ ಮಾತ್ರ ನಾಯಕನಲ್ಲ. ಎಲ್ಲಾ ಧರ್ಮ, ಸಮುದಾಯಗಳಿಗೂ ಸ್ಫೂರ್ತಿಯಾಗಿದ್ದಾರೆ. ಅರ್ಥ ಶಾಸ್ತ್ರಜ್ಞನಾಗಿ, ಸಮಾಜ ಸುಧಾರಕನಾಗಿ, ವಿಜ್ಞಾನಿಯಾಗಿ, ಕೃಷಿಕನಾಗಿ ಎಲ್ಲ ರಂಗಗಳಲ್ಲಿ ಮೊದಲಿಗರಾಗಿ ಕಾಣಿಸುತ್ತಾರೆ.
ಶೋಷಿತ ಸಮುದಾಯಗಳು ಬದಲಾಗಬೇಕು. ಪರಿವರ್ತನೆ ಆಗದ ಹೊರತು ಏನನ್ನು ಸಾಧಿಸಲಾಗದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಮಾಜಿ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್ ಮಹದೇವಯ್ಯ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಮಂಜು ಶಂಕರಪುರ, ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಉಪ್ಪಾರ ಸಂಘದ ಅಧ್ಯಕ್ಷ ಮೂಗಶೆಟ್ಟಿ, ರೈತ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್, ಕೆಪಿಸಿಸಿ ಸದಸ್ಯ ಮೊಹಮ್ಮದ್ ಅಕ್ಬರ್ ಅಲಿ, ಸಮಾಜ ಸೇವಕ ಶಂಕರ್, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಉಪಾಧ್ಯಕ್ಷ ರಾಜಶೇಖರ್, ಗೌರವಾಧ್ಯಕ್ಷ ಗೀಕಹಳ್ಳಿ ಮಹದೇವಸ್ವಾಮಿ, ಕಾರ್ಯಾಧ್ಯಕ್ಷ ನಾಗೇಂದ್ರ ಬಸವಟ್ಟಿಗೆ, ಪ್ರಧಾನ ಕಾರ್ಯದರ್ಶಿ ಆಲತ್ತೂರು ಶಿವರಾಜ್, ಸೇರಿದಂತೆ ಹಲವರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button