ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವರು..!

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ಚಾಮರಾಜನಗರದಲ್ಲಿ ಪ್ರಗತಿ ಪರಿಶೀಲನೆ ಕೆಡಿಪಿ ಸಭೆ ನಡೆಸಿದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ವಿವಿಧ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಬೆವರಿಳಿಸಿದ್ದಾರೆ. ಸರ್ಕಾರದಿಂದ ಅನುದಾನ ಬಿಡುಗಡೆಯಾಗಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಈ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ನೀರಾವರಿ ಇಲಾಖೆ, ಸಾರಿಗೆ ಇಲಾಖೆ, ಲೋಕಪಯೋಗಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೆಲಸ ಮಾಡಲಿ ಇಷ್ಟವಿಲ್ಲದಿದ್ದರೆ ಜಿಲ್ಲೆಯನ್ನು ಬಿಟ್ಟು ಹೋಗಬಹುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಸರ್ಕಾರಿ ನೌಕರರು ತಮ್ಮ ಡ್ರೆಸ್ ಕೋಡ್ ಮರೆತು ಬಂದಿದ್ದಾರೆ ಎಂದು ಕಿಡಿಕಾರಿದರು