ಬೇಡುಗುಳಿ ಗ್ರಾಮದಲ್ಲಿ ದರ್ತಿ ಅಬಾ ಜನ ಜಾತಿಯ ಉನ್ನತ್ ಗ್ರಾಮ ಅಭಿಯಾನ

ಚಾಮರಾಜನಗರ,ಡಿ.01:ದರ್ತಿ ಅಬಾ ಜನ ಜಾತಿಯ ಉನ್ನತ ಗ್ರಾಮ ಅಭಿಯಾನದ ಯೋಜನೆಯಡಿ ಬೇಡಗುಳಿ ಗ್ರಾಮದ ಪರಿಶಿಷ್ಟ ವರ್ಗದ ಜನರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ದೊರೆಯುವ ಮೂಲಭೂತ ಸೌಕರ್ಯ ಪಡೆದುಕೊಳ್ಳಬೇಕೆಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುಬ್ಬರಾಯ ಅವರು ಸಲಹೆ ನೀಡಿದರು.
ತಾಲೂಕಿನ ಬೇಡಗುಳಿ ಗ್ರಾಮದಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದ ಅವರು ಅಭಿಯಾನದಲ್ಲಿ ತಾಲೂಕಿನ ಯಾನಗಳ್ಳಿ, ಕಣ್ಣೇಗಾಲ, ಮೇಲ್ಮಾಳ, ಹಾಗೂ ಬೇಡುಗುಳಿ ಗ್ರಾಮಗಳು ಆಯ್ಕೆಯಾಗಿದ್ದು, 17 ಇಲಾಖೆಗಳ ಸಹಯೋಗದೊಂದಿಗೆ ಸರ್ವೆ ಕಾರ್ಯವನ್ನು ನಡೆಸಿ ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಗಾಗಿ ಕ್ರಿಯ ಯೋಜನೆಯನ್ನು ತಯಾರಿಸಲಾಗುತ್ತಿದೆ, ಅದರಂತೆ ಈ ಗ್ರಾಮ ಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ನಾಯ್ಕ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹೇಶ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಎಇ.ಶಿವಾಜಿ ನಾಯಕ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕ್ಷಕ ಸುರೇಶ್, ಆಶ್ರಮ ಶಾಲೆಯ ಶಿಕ್ಷಕ ಸೋಮಣ್ಣ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ