ಇತ್ತೀಚಿನ ಸುದ್ದಿ

ಚಂದಕವಾಡಿಯಲ್ಲಿ 200 ಮಂದಿಗೆ ನಡೆದ ಉಚಿತ ಕಣ್ಣಿನ ತಪಾಸಣೆ

ಚಾಮರಾಜನಗರ :ಡಿ.01, ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರ ದೇವಸ್ಥಾನ ಹಾಗೂ ಅರವಿಂದ ಕಣ್ಣಿನ ಆಸ್ಪತ್ರೆ ಕೊಯಮತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಚಂದಕವಾಡಿ ಸೇರಿದಂತೆ ಸುತ್ತಮುತ್ತಲಿನ 200 ಮಂದಿ ಗ್ರಾಮಸ್ಥರು ಪಾಲ್ಗೊಂಡು ಕಣ್ಣಿನ ತಪಾಸಣೆ ಮಾಡಿಸಿಕೊಂಡರು.


ಈ ಸಂದರ್ಭದಲ್ಲಿ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಎಲ್ . ರಂಗರಾಮು ಅವರು ಮಾತನಾಡಿ, ಕಳೆದ 22 ವರ್ಷಗಳಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ, ಸಾಮೂಹಿಕ ವಿವಾಹ, ಕಥಾ ಕಾಲ ಕ್ಷೇಪ, ಅನ್ನ ಸಂತರ್ಪಣೆ ನಡೆಸಿಕೊಂಡು ಬರಲಾಗುತ್ತಿದೆ, ಅದೇ ರೀತಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು, ನಿರೀಕ್ಷೆಗೂ ಮೀರಿ ಸಾರ್ವಜನಿಕರು ಆಗಮಿಸಿ ಕಣ್ಣು ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದು ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.


ಶಿಬಿರದಲ್ಲಿ ಕೊಯಮತ್ತೂರು ಅರವಿಂದ ಕಣ್ಣಾ ಆಸ್ಪತ್ರೆಯ ವೈದ್ಯರಾದ ಡಾ.ನಂದಿನಿ, ಡಾ.ಶ್ರೀ ಲೇಖ, ವಿಜಯಕಾಂತ್, ದೇವಸ್ಥಾನದ ಸಿಬ್ಬಂದಿಗಳಾದ ಉಮಾಪತಿ, ನಾಗೇಂದ್ರ, ಶಂಕರ, ಶಿವು, ಸೆಲ್ವ, ಮಹದೇವಮ್ಮ, ರಂಗಮ್ಮ, ರಾಜೇಶ್ವರಿ, ಮಹೇಶ್ವರಿ, ಕಲಾವತಿ, ಮಾಲಿನಿ, ಮಮತಾ ಸೇರಿದಂತೆ ಇತರರು ಭಾಗವಹಿಸಿದ್ದರು.


ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ

Related Articles

Leave a Reply

Your email address will not be published. Required fields are marked *

Back to top button