ಡಾ.ಬಿ.ಆರ್. ಅಂಬೇಡ್ಕರ್ ಅವರಿಂದ ದೇಶಕ್ಕೆ ಉತ್ತಮ ಸಂವಿಧಾನ: ಸಿ.ಎಂ. ಶಿವಣ್ಣ

ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತಕ್ಕೆ ಉತ್ತಮ ಸಂವಿಧಾನ ನೀಡಿದ್ದು, ಈ ದೇಶದ ಜನರಿಗೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಸಾಮಾಜಿಕ ನ್ಯಾಯದಡಿ ಸಂವಿಧಾನ ನೀಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ತಳಿಗೆ ದಲಿತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ಇಂದು ದಿನವಾಗಿದ್ದು ಅವರನ್ನು ಎಲ್ಲರೂ ಇಂದು ಸ್ಮರಿಸಬೇಕಾಗಿದೆ. ಅಲ್ಲದೆ ಕೆಲವು ಕಾಣದ ಕೈಗಳು ಸಂವಿಧಾನವನ್ನು ಬದಲಾಯಿಸಬೇಕು ಎಂಬ ಹುಣ್ಣಾರ ನಡೆಸುತ್ತಿದೆ ಆದರೆ ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ, ಒಂದು ವೇಳೆ ಸಂವಿಧಾನ ಬದಲಾವಣೆಗೆ ಮುಂದಾದರೆ ದೇಶದಾದ್ಯಂತ ಹೋರಾಟ ನಡೆಯಲಿದೆ, ಅಲ್ಲದೆ ಪ್ರಗತಿಪರ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಕಪ್ಪು ಬಾವುಟ ಪ್ರದರ್ಶಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭಾ ಮಾಜಿ ಸದಸ್ಯರ ರಾಮಸಮುದ್ರ ಬಸವರಾಜು, ಎಂ.ಶಿವಮೂರ್ತಿ, ಕನ್ನಡ ಸಂಘಟನೆಯ ಮುಖಂಡ ಚಾ.ಗು.ನಾಗರಾಜು, ಗುತ್ತಿಗೆದಾರ ಹೆಚ್.ಹೆಚ್.ನಾಗರಾಜು, ರಾಮಸಮುದ್ರ ಸುಂದರ್,ಸಿದ್ದಪ್ಪಾಜಿ.ಟಿ, ಲಿಂಗರಾಜು,ಚಿನ್ನಸ್ವಾಮಿ ಇದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ, tv8newskannada ಚಾಮರಾಜನಗರ