ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ ಸಿ ಎಂ ಅಚ್ಚರಿ ಹೇಳಿಕೆ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೆ ತಮ್ಮ ರಾಜಕೀಯ ಜೀವನ ನಡೆದುಕೊಂಡು ಬಂದ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣವೂ ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕಿಯಾಗಿದೆ.
ಹೌದು, ಮುಡಾ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದು, ಈಗಾಗಲೇ ಸಿದ್ದರಾಮಯ್ಯ ಅವರು ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಇದನ್ನೂ ಓದಿ: ಅಲ್ಲು ಅರ್ಜುನ್ ಮೃತ ಕುಟುಂಬಕ್ಕೆ 25 ಲಕ್ಷ ಕೊಟ್ಟಿದ್ಯಾಕೆ?
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅಚ್ಚರಿ ಹೇಳಿಕೆಯನ್ನು ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೂ ಹಾಗೂ ರಾಜಕೀಯ ನಾಯಕರುಗಳು ಬಿಗ್ ಶಾಕ್ ನೀಡಿದ್ದಾರೆ.
ನಾನು ರಾಜಕೀಯ ಕೊನೆಗಾಲದಲ್ಲಿದ್ದೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೂ ಹಾಗೂ ರಾಜಕೀಯ ವ್ಯಕ್ತಿಗಳಿಗೂ ಅಚ್ಚರಿ ಮೂಡಿಸಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದರು.
ವರದಿ: C ಕೊಟ್ರೇಶ್ tv8newskannada ಬೆಂಗಳೂರು