Belagavi Session-2024 : ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದಬಳಕೆ, ಗಳಗಳನೇ ಕಣ್ಣೀರಿಟ್ಟ ಸಚಿವೆ ಹೆಬ್ಬಾಳ್ಕರ್!

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದ್ದು, ರವಿ ಅವರ ಪದ ಬಳಕೆಗೆ ಸಚಿವೆ ಕಣ್ಣೀರು ಹಾಕಿರುವ ವರದಿಯಾಗಿದೆ.
ಈ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ಹೆಬ್ಬಾಳ್ಕರ್ ಅವರು ದೂರು ನೀಡಿದ್ದು, ಸಭಾಪತಿ ಎದುರು ಅವರು ಕಣ್ಣೀರು ಸುರಿಸಿದ್ದಾರೆ. ರವಿ ಅವರ ಹೇಳಿಕೆಯಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣಿರು ಹಾಕುತ್ತಲೇ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ.
ಇನ್ನು ಘಟನೆ ಬೆನ್ನಲ್ಲೇ ಸುವರ್ಣಸೌಧದ ಸಿಎಂ ಸಿದ್ದರಾಮಯ್ಯ ಅವರ ಕಚೇರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಡಾ.ಸುಧಾಕರ್ ಇನ್ನಿತರ ಆಗಮಿಸಿ ಸಿ.ಟಿ.ರವಿ ಹೇಳಿಕೆ ಕುರಿತು ಸಿಎಂಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ರವಿ ಅವರ ಅಮಾನಿತಿಗೆ ಆಗ್ರಹಿಸಿದ್ದಾರೆ. ಹತ್ತು ಬಾರಿ ಸಿಟಿ ರವಿ ಅವರು ಅಶ್ಲೀಲ ಬದ ಬಳಕೆ ಮಾಡಿದ್ದಾರೆಂದು ಆರೋಪಿಸಲಾಗುತ್ತಿದ್ದು, ಆಡಿಯೋ-ವಿಡಿಯೋ ಪರಿಶೀಲನೆಗೆ ಸಭಾಪತಿಗಳು ಸೂಚಿಸಿದ್ದಾರೆ.