ಮೊಬೈಲ್ ನಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಘಟಕರ ಆಕ್ರೋಶ

ನಂಜನಗೂಡು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಪದಾಧಿಕಾರಿಗಳು ಮೊಬೈಲ್ ನಲ್ಲಿ ಅಂಬೇಡ್ಕರ್ ರವರ ಭಾವಚಿತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಮಂಜು ಶಂಕರಪುರ ಅಧ್ಯಕ್ಷತೆಯಲ್ಲಿ ಮಾಧ್ಯಮಗೋಷ್ಠಿ ನಡೆಸಲಾಯಿತು.
ಈ ವೇಳೆ ಮೊಬೈಲ್ ಫೋನ್ ನಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಕಿಡಿಕಾರಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಸದನದಲ್ಲಿ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಾವು ತೀವ್ರವಾಗಿ ಖಂಡಿಸಿ, ಇದೇ ಡಿ.21 ರಂದು ಶನಿವಾರ ನಂಜನಗೂಡಿನ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ. ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ರಾಷ್ಟ್ರ ದ್ರೋಹ ಪ್ರಕರಣವನ್ನು ದಾಖಲು ಮಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಮಂಜು ಶಂಕರಪುರ, ಗೌರವಾಧ್ಯಕ್ಷ ಗೀಕಹಳ್ಳಿ ಮಹದೇವಸ್ವಾಮಿ, ಉಪಾಧ್ಯಕ್ಷ ರಾಜಶೇಖರ್, ಕಾನೂನು ಸಲಹೆಗಾರ ಬೊಕ್ಕಹಳ್ಳಿ ಮಹದೇವಸ್ವಾಮಿ, ಮಾಧ್ಯಮ ಕಾರ್ಯದರ್ಶಿ ಹನುಮನಪುರ ಜೆ.ಮಹದೇವ ಕುಮಾರ್, ಸಂಘಟನಾ ಕಾರ್ಯದರ್ಶಿ ಹರದನಹಳ್ಳಿ ರಾಜೇಶ್, ಹಿರಿಯ ಹೋರಾಟಗಾರ ದೇವರಸನಹಳ್ಳಿ ಮಹದೇವಸ್ವಾಮಿ, ಮೂಡಹಳ್ಳಿ ಮಹದೇವ್, ಬೆಳಲೆ ಮಹೇಶ್, ಹುಸ್ಕೂರು ಸಿದ್ದರಾಜು, ಮರಿಸ್ವಾಮಿ, ನಿಖಿಲ್ ಹಾಜರಿದ್ದರು.