ದೇಶ
NARENDRA MODI: ಇತಿಹಾಸದಲ್ಲೇ ಮೊದಲು- ಸಿಬಿಸಿಐ ಆಯೋಜಿಸಿದ್ದ ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯ ಸಿಬಿಸಿಐ ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಂಡರು.

ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನ ಮಂತ್ರಿ ಸಂವಾದ ನಡೆಸಿದರು.
ಮಾತ್ರವಲ್ಲದೇ ಭಾರತದ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಇದೇ ಮೊದಲು ಎಂದು ಕ್ಯಾಥೋಲಿಕ್ ಚರ್ಚ್‌ನ ಪ್ರಧಾನ ಕಛೇರಿ ತಿಳಿಸಿದೆ.

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (CBCI) ಅನ್ನು 1944 ರಲ್ಲಿ ಸ್ಥಾಪಿಸಲಾಯಿತು. ಇದು ಭಾರತದಾದ್ಯಂತ ಎಲ್ಲಾ ಕ್ಯಾಥೋಲಿಕ್‌ಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದೆ.