ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವಿನ ಟ್ವೀಟ್ ಸಮರ ನಿಲ್ಲುವಂತೆ ಕಾಣಿಸುತ್ತಿಲ್ಲ. ಚುನಾವಣೆ ಪ್ರಚಾರ ವೇಳೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರು (Former CM Siddaramaiah) ಏಕವಚನದಲ್ಲಿಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಿದ್ದರಾಮಯ್ಯನವರ ಹೇಳಿಕೆಗಳಿಗೆ ಬಿಜೆಪಿ ಸಹ ತಿರುಗೇಟು ನೀಡಿತ್ತು. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ವಾಸ್ತವದ ಬಗ್ಗೆ ಮಾತನಾಡದ ಪ್ರಧಾನಿಗಳು ತಮ್ಮ ಹೆಸರು ಬದಲಿಸಿಕೊಳ್ಳಲಿ ಎಂದು ಹೇಳಿದೆ. ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ (Petrol Price) 66 ರೂ ಮತ್ತು ಡೀಸೆಲ್ (Diesel Price) 55 ರೂಪಾಯಿಗೆ ದೊರಕುತ್ತಿತ್ತು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ಸರ್ಕಾರದ ತೆರಿಗೆ ಭಯೋತ್ಪಾದನೆ
ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ (tax) ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ. ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ.
ಬೆಲೆ ಏರಿಕೆಯ ಬಗ್ಗೆ -ಮೌನ
ಕಾಶ್ಮೀರದ ದಳ್ಳುರಿಗೆ -ಮೌನ
ಚೀನಾ ಅತಿಕ್ರಮಣಕ್ಕೆ -ಮೌನ
ರೈತರ ಹತ್ಯೆಗೆ -ಮೌನ
ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
ನಿರುದ್ಯೋಗದ ಬಗ್ಗೆ -ಮೌನ
ಪತ್ರಿಕಾಗೋಷ್ಠಿಗೆ -ಮೌನ