ಇತ್ತೀಚಿನ ಸುದ್ದಿ
ಡಾ.ಎಸ್.ಪಿ. ಬಾಲಸುಬ್ರಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಡಾ. ವಿಷ್ಣುವರ್ಧನ್ ಪುಣ್ಯ ಸ್ಮರಣೆ ಆಚರಣೆ

ಚಾಮರಾಜನಗರ: ಡಾ.ಎಸ್.ಪಿ. ಬಾಲಸುಬ್ರಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯಿಂದ ನಡೆದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 15ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಅಧ್ಯಕ್ಷತೆ ವಹಿಸಿ ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ಹಿರಿಯ ಹೋರಾಟಗಾರ ವೆಂಕಟರಮಣಸ್ವಾಮಿ(ಪಾಪು) ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಂ. ಶಿವಣ್ಣ ಮಂಗಲ ಹೊಸೂರು, ಕನ್ನಡಪರ ಹೋರಾಟಗಾರ ಪಣ್ಯದುಂಡಿ ರಾಜು,ಕಲಾಪೋಷಕರಾದ ರಂಗಸ್ವಾಮಿ ಕಾಗಲವಾಡಿ,
ಗೌರಿಶಂಕರ್ ರಾಮಸಮುದ್ರ,ಉಮತ್ತೂರು ಚಂದ್ರು, ಸಂತೇಮರಹಳ್ಳಿ ಸರ್ಕಲ್ ಆಟೋ ಚಾಲಕರ ಸಂಘದ ಅಧ್ಯಕ್ಷ ಮಹೇಶ್, ಮಂಜುನಾಥ್ ವಿಶ್ವಕರ್ಮ,ಮಹದೇವಸ್ವಾಮಿ(ಚಿಕ್ಕ), ಚನ್ನಶೆಟ್ಟಿ ಸೇರಿದಂತೆ ಇತರರು ಇದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada, ಚಾಮರಾಜನಗರ