ಅಯೋಧ್ಯಾ ಶ್ರೀ ರಾಮನಿಗೆ ವರ್ಷದ ಸಂಭ್ರಮ

ಅಯೋಧ್ಯೆ : ಹಿಂದೂಗಳ ಆರಾಧ್ಯ ದೈವ, ಮಾರ್ಯದಾ ಪುರುಷೋತ್ತಮ ಶ್ರೀರಾಮನ ಜನಸ್ಥಳವಾದ ಆಯೋಧ್ಯೆಯಲ್ಲಿ ರಾಮಲಲ್ಲಾನ ಭವ್ಯ ಮಂದಿರ ಆರಂಭವಾಗಿ ಇದೀಗ ಒಂದು ವರ್ಷ ಪೂರ್ಣಗೊಂಡಿದೆ.
ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ವಾರ್ಷಿಕೋತ್ಸವದ ಸಂಭ್ರಮ ಇಂದಿನಿಂದ ಮೂರು ದಿನಗಳ ಜರುಗಲಿದೆ.ಸಾಂಸ್ಕೃತಿಕ, ಆಧ್ಯಾತಿಕತೆಯ ರಾಜಧಾನಿಯಂತಿರುವ ಉತ್ತರ ಪ್ರದೇಶದಲ್ಲಿ ಇದೀಗ ಆಯೋಧ್ಯೆಯೇ ದೇಶದ ಗಮನ ಸೆಳೆಯುತ್ತಿರುವುದು. ಅದಕ್ಕೆಲ್ಲ ಕಾರಣ ಅಲ್ಲಿ ಏನೆಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂಬುದು. ಮೊದಲ ಕಾಲ ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದೆ.2024ರಲ್ಲಿ ಅಂ- ದರೆ, ಕಳೆದ ವರ್ಷವಷ್ಟೆ ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡು ಕೋಟ್ಯಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ.
ಹಿಂದೂ ಪಂಚಾಂಗದ ಪ್ರಕಾರಲ್ಲಿ ಜ.11ರಿಂದ 13ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ (ಪ್ರತಿಷ್ಠಾ ದ್ವಾದಶಿ) ಹಮಿಕೊಳ್ಳಲಾಗಿದೆ. ಮೊದಲ ದಿನ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಾಲ ರಾಮನಿಗೆ ಅಭಿಷೇಕ ನೆರವೇರಿಸಲಿದ್ದಾರೆ. ಮಂದಿರದ ಸಮೀಪವಿರುವ ಅಂಗದ ಟೀಲಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜತೆಗೆ, ಖ್ಯಾತ ಗಾಯಕರ ಭಕ್ತಿ ಗೀತೆಗಳೂ ಬಿಡುಗಡೆಗೊಳ್ಳಲಿವೆ. ದೇಶಾದ್ಯಂತವಿರುವ ಸಂತರು ಭಕ್ತ- ರಿಗೆ ಟ್ರಸ್ಟ್ ಆಮಂತ್ರಣ ಕಳುಹಿಸಿದೆ. ಈಗಾಗಲೇ ಅಯೋಧ್ಯೆಯ ರಾಮ ಮಂದಿರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಒಂದೊಂದೇ ಕಾರ್ಯಕ್ರಮಗಳು ನೆರವೇರುತ್ತಿವೆ.
ಹಾಗೂ ಈ ಬಗ್ಗೆ ಮಾಹಿತಿ ನೀಡಿರುವ ರಾಮ ಜನಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಜ.11ರಂದು ಮ.12.20ಕ್ಕೆ ಬಾಲರಾಮನ ಮೂರ್ತಿಗೆ ವಿಶೇಷ ಪೂಜೆ ಮತ್ತು ಆರತಿ ಮಾಡುವ ಮೂಲಕ 3 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಈ ಬಾರಿ ಕಾರ್ಯಕ್ರಮದಲ್ಲಿ ಶ್ರೀಸಾಮಾನ್ಯನೂ ಭಾಗಿಯಾಗಲು ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.
ಉದ್ಘಾಟನೆಗೆ ಬರದವರಿಗೆ ಆಹ್ವಾನ: ರಾಮಮಂದಿರ ಉದ್ಘಾಟನೆಗೆ ಬರದ ಸಂತರು ಮತ್ತು ಗಣ್ಯರಿಗೆ ಈಗ ಆಹ್ವಾನ ನೀಡಲಾಗುತ್ತದೆ. ಒಟ್ಟು 5 ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಮೊದಲ ಕಾರ್ಯಕ್ರಮ ಮಂದಿರದಲ್ಲಿ, 2 ಮತ್ತು 3ನೇ ಕಾರ್ಯಕ್ರಮ ಯಜ್ಞ ಮಂಟಪದಲ್ಲಿ, 4 ಮತ್ತು 5ನೇ ಕಾರ್ಯಕ್ರಮ ಅಂಗದ್ ತಿಲಾದಲ್ಲಿ ನಡೆಸಲಾಗುತ್ತದೆ ಎಂದು ಅವರು ಹೇಳಿದರು. ಉದ್ಘಾಟನೆಗೊಂಡ ವರ್ಷದೊಳಗೇ ಅಯೋಧ್ಯೆ ರಾಮಮಂದಿರ ದೇಶದ ನಂ.1 ಪ್ರವಾಸಿ ತಾಣ ಅಥವಾ ಭಕ್ತಾದಿಗಳ ನೆಚ್ಚಿನ ಭೇಟಿಯ ತಾಣವಾಗಿ ಹೊರಹೊಮ್ಮಿದೆ. 2024ರ ಜನವರಿ ಮತ್ತು ಸೆಪ್ಟೆಂಬರ್ ಅವಧಿಯಲ್ಲಿ ಉತ್ತರ ಪ್ರದೇಶಕ್ಕೆ ಸುಮಾರು 47 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರು.
ಈ ಪೈಕಿ ಆಯೋಧ್ಯೆ ಒಂದಕ್ಕೆ 13.3 ಕೋಟಿ ಪ್ರವಾಸಿಗರು ಭೇಟಿ ಕೊಟ್ಟಿದ್ದಾರೆ. ಅದರಲ್ಲಿ 3,153 ವಿದೇಶಿಗರೂ ಕೂಡ ಸೇರಿದ್ದಾರೆ.
ಮಂದಿರವು ರಾಜ್ಯದ ಪ್ರವಾಸೋದ್ಯಮದ ನಕಾಶೆಯನ್ನೆ ಬದಲಿಸಿದೆ. ಹಬ್ಬಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ದೀಪಾವಳಿ ಸಂದರ್ಭದಲ್ಲಿ ಸರಯೂ ನದಿಯ ದಂಡೆಯ ಮೇಲೆ 22 ಲಕ್ಷ ಹಣತೆಗಳನ್ನು ಸರ್ಕಾರ ಬೆಳಗಿಸುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿತು. ರಾಮಮಂದಿರ ಸುರಕ್ಷತೆ ನಿರ್ವಹಣೆಗೆ ವಿಶ್ವದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪ್ರತಿಷ್ಠಿತ ಸ್ವರ್ಡ್ ಆಫ್ ಆನರ್ ಪ್ರಶಸ್ತಿಯನ್ನು ರಾಮಮಂದಿರ ಪಡೆದುಕೊಂಡಿದೆ. ಜ.11ರ ಮೊದಲ ದಿನ ಪ್ರತಿಷ್ಠಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭವಾಗಲಿದೆ. ಪಂಚಾಮೃತ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಆರಂಭ. ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ರಾಮಲಲ್ಲಾಗೆ ಅಭಿಷೇಕ ಬಳಿಕ ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ ಕಾರ್ಯಕ್ರಮ ನಡೆಯಲಿದೆ.
202400 ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರಂದು ನಡೆಸಲಾಯಿತು. ಆದರೆ, ಈ ವರ್ಷ ಅಂದರೆ 2025ರಲ್ಲಿ ಆಯೋಧ್ಯೆ ರಾಮ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವವನ್ನು ಜನವರಿ 11 ರಂದು ಶನಿವಾರ ಆಚರಿಸಲಾಗುತ್ತಿದೆ. ಯಾಕೆಂದರೆ, ವೈದಿಕ ಸನಾತನ ಸಂಸ್ಕೃತಿಯ ಕ್ಯಾಲೆಂಡರ್ ಪ್ರಕಾರ, 2025ರಲ್ಲಿ ಪುಷ್ಯ ಮಾಸದ ಕೂರ್ಮ ದ್ವಾದಶಿಯು ಜನವರಿ 11 ರಂದು ಬರಲಿದೆ. ಕೂರ್ಮ ದ್ವಾದಶಿಯ ಆಧಾರದ ಮೇಲೆ ಆಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನಾ ಮಹೋತ್ಸವವನ್ನು ಆಚರಿಸಲಾಗುವುದು.

ಈ ವರ್ಷ ಅಂದರೆ 2025ರ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯು ಸಂಪೂರ್ಣವಾಗಿ ಒಂದು ವರ್ಷವನ್ನು ಪೂರೈಸಲಿದೆ.2025ರ ಜನವರಿ 11ರಂದು ಶನಿವಾರ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯು ಇರಲಿದೆ. ಈ ದಿನ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವ ಆಚ- ರಿಸಲಾಗುವುದು. ಈ ಶುಭ ದ್ವಾದಶಿ ತಿಥಿಯಂದು ಹತ್ತು ಶುಭ ಯೋಗಗಳು ಏಕಕಾಲದಲ್ಲಿ ರೂಪುಗೊಳ್ಳುತ್ತಿವೆ.
ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟ ಪೀತಾಂಬರಿಯಿಂದ ರಾಮಲಲ್ಲಾ ಮೂರ್ತಿಯ ಆಲಂಕಾರದ ಜೊತೆಗೆ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರಿಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು ಮಾಡಲಾಗಿದ್ದು, 110 ಗಣ್ಯರು, ಜನಸಾಮಾನ್ಯರು ಸೇರಿ 5,000 ಜನ- ರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ರಾಮಮಂದಿರ ಸಂಕೀರ್ಣದ ಒಟ್ಟು ವಿಸ್ತಾರ 72 ಎಕರೆ. ಈ ಪೈಕಿ ಮೊದಲಿಗೆ ನಿರ್ಮಾಣವಾಗಿದ್ದು ಅಂದಾಜು 3 ಎಕರೆ ಪ್ರದೇಶದಲ್ಲಿನ ರಾಮಮಂದಿರ ಮಾತ್ರ. ಇದನ್ನು 1800 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.
✒️ವರದಿ ಹಾಗು ಸಂಗ್ರಹ : ಮೊಹಮದ್ ಶಫಿ ಸ್ಪೆಶಲ್ ಡೆಸ್ಕ್ tv8kannada ಬೆಂಗಳೂರು