ದೇವದುರ್ಗ: ಮೂತ್ರ ವಿಸರ್ಜನೆಗೆ ಹೋಗಿದ್ದ ಬಾಲಕಿಯನ್ನ ಹಿಂಬಾಲಿಸಿ ಬಲತ್ಕಾರಕ್ಕೆ ಯತ್ನಿಸಿದ ಕಾಮುಕ!

ದೇವದುರ್ಗ : ಕಲಬುರಗಿ, ಬಳ್ಳಾರಿಯಲ್ಲಿ ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ ನಡೆದಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಬಸ್ ನಿಲ್ದಾಣದ ಬಳಿ ಮೂತ್ರ ವಿಸರ್ಜನೆಗೆ ಹೋಗಿದ್ದ ಅಪ್ರಾಪ್ತ ಬಾಲಕಿಯನ್ನ ಹಿಂಬಾಲಿಸಿ ಕಾಮುಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದೇವದುರ್ಗ ಮೂಲದ ನಾಗು(35) ಎಂಬಾತನಿಂದ ಕೃತ್ಯ. ನಿನ್ನೆ ಪೋಷಕರೊಂದಿಗೆ ದೇವದುರ್ಗ ಬಸ್ ನಿಲ್ದಾಣಕ್ಕೆ ಬಂದಿದ್ದ ಬಾಲಕಿ. ಬಸ್ ನಿಲ್ದಾಣದ ಬಳಿಯ ಜಾಲಿಗಿಡಗಳ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದಳು. ಈ ವೇಳೆ ಅಲ್ಲೇ ಹೊಂಚು ಹಾಕಿ ಕೂತಿದ್ದ ಕಾಮುಕ. ಬಾಲಕಿ ಮೂತ್ರ ವಿಸರ್ಜನೆಗೆ ತೆರಳುತ್ತಿದ್ದಂತೆ ಹಿಂಬಾಲಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕಿರುಚಾಡಿದ್ದಾಳೆ. ಅದೃಷ್ಟವಶಾತ್ ಕಿರುಚಾಟ ಕೇಳಿ ದಾವಿಸಿ ಬಂದ ಪೋಷಕರು, ಸಾರ್ವಜನಿಕರು ಬಾಲಕಿಯನ್ನ ರಕ್ಷಣೆ ಮಾಡಿದ್ದಾರೆ. ಕಾಮುಕ ಯುವಕನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಘಟನೆ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.