ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿಗೆ 14 ವರ್ಷ ಜೈಲುವಾಸ! ಪತ್ನಿಗೆ 7 ವರ್ಷ ಶಿಕ್ಷೆ | Imran Khan

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಷ್ರಾ ಬೀಬಿಯನ್ನು 190 ಮಿಲಿಯನ್ ಪೌಂಡ್ (ಅಂದರೆ 50 ಶತಕೋಟಿ) ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಗಳೆಂದು ಘೋಷಿಸಿದ ನ್ಯಾಯಾಲಯವು, ಇಮ್ರಾನ್ಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ ಎಂದು ಪಾಕಿಸ್ತಾನ ಸುದ್ದಿ ಸಂಸ್ಥೆಗಳು ಮಾಹಿತಿ ಹಂಚಿಕೊಂಡಿವೆ.
ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ಸಾಬೀತುಪಡಿಸಿದೆ. ಖಾನ್ ತಪ್ಪಿತಸ್ಥ ಎಂಬುದು ಇಲ್ಲಿ ಸ್ಪಷ್ಟವಾಗಿದೆ ಎಂದ ಕೋರ್ಟ್, ಮಾಜಿ ಪ್ರಧಾನಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಿದರೆ, ಅವರ ಪತ್ನಿ ಬೀಬಿಗೆ ಏಳು ವರ್ಷಗಳ ಜೈಲುವಾಸವನ್ನು ವಿಧಿಸಿದೆ. ಆದಾಗ್ಯೂ, ವಿರೋಧ ಪಕ್ಷದ ನಾಯಕ ಈ ಶಿಕ್ಷೆಯನ್ನು ಪ್ರಶ್ನಿಸುವುದಾಗಿ ಹೇಳಿದ್ದಾರೆ ಎಂದು ರಾಯಿಟರ್ಸ್ ತನ್ನ ವರದಿಯಲ್ಲಿ ತಿಳಿಸಿದೆ.
190 ಮಿಲಿಯನ್ ಪೌಂಡ್‌ಗಳ ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್ಗೆ ಸಂಬಂಧಿಸಿದ ಭ್ರಷ್ಟಾಚಾರ ಕೇಸ್ನಲ್ಲಿ ಇಮ್ರಾನ್ ಮತ್ತು ಅವರ ಪತ್ನಿ ತಪ್ಪಿತಸ್ಥರೆಂದು ಸಾಬೀತಾದ ಬೆನ್ನಲ್ಲೇ ಕೋರ್ಟ್ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಮಾಜಿ ಪ್ರಧಾನಿಗೆ 14 ವರ್ಷಗಳ ಜೈಲು ಶಿಕ್ಷೆಯ ಜತೆಗೆ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇನ್ನು ಬೀಬಿಗೆ ಐದು ವರ್ಷಗಳ ಸೆರೆಮನೆ ವಾಸದ ಜತೆಗೆ 5 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.