Kiccha Sudeep: ಬಿಗ್ ಬಾಸ್‌ಗೆ ಗುಡ್ ಬೈ ಹೇಳಿದ ನಟ ಕಿಚ್ಚ ಸುದೀಪ್ : ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಮಾಣಿಕ್ಯ

ಬೆಂಗಳೂರು : ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ನಟ ಸುದೀಪ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು, ಕಳೆದ 11 ಸೀಸನ್‌ಗಳಿಂದ ನಾನು ಬಿಗ್ ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ.
ನೀವು ತೋರಿಸಿದ ಪ್ರೀತಿಗೆ ಎಲ್ಲರಿಗೂ ಧನ್ಯವಾದಗಳು. ಮುಂಬರುವ ಫೈನಲ್ ಆತಿಥೇಯನಾಗಿ ನನ್ನ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನನ್ನ ಅತ್ಯುತ್ತಮ ಮನರಂಜನೆಗಾಗಿ ಆಶಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನನ್ನ ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಈ ಅವಕಾಶ ನೀಡಿದ ಕಲರ್ಸ್ ಕನ್ನಡಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಅತಿದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಕಾರ್ಯಕ್ರಮವನ್ನ ನಟ ಕಿಚ್ಚ ಸುದೀಪ್ ಅವರು ನಡೆಸಿಕೊಡುತ್ತಿದ್ದು, ಆರಂಭದಿಂದ ಬಿಗ್ ಬಾಸ್ ಕನ್ನಡದ ಹೋಸ್ಟ್ ಆಗಿ 11 ಸೀಸನ್ಗಳನ್ನು ನಡೆಸಿಕೊಟ್ಟಿದ್ದಾರೆ. ಇದು ನನ್ನ ಕೊನೆಯ ಸೀಸನ್ ಎಂದು ನಟ ಕಿಚ್ಚ ಸುದೀಪ್ ಅವರು ಈ ಮೊದಲು ಹೇಳಿದ್ದರು. ಈಗ ಅವರು ಅಧಿಕೃತವಾಗಿ ಬಿಗ್ ಬಾಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದಾರೆ.