ಕ್ರೈಂ
BREAKING : ಲಿಂಗಸುಗೂರು ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನ..!

ರಾಯಚೂರು: ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ಇಡೀ ರಾಜ್ಯ ಘಟನೆಯಿಂದ ಬೆಚ್ಚಿಬಿದ್ದಿದ್ದು, ಭೀಕರವಾಗಿ ಹತ್ಯೆಯಾದ ವಿದ್ಯಾರ್ಥಿನಿ ಸಿಫಾ (22) ಎಂದು ತಿಳಿದುಬಂದಿದೆ.
ಸಿಂಧನೂರಿನ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಿಫಾ ಮೂಲತಃ ಲಿಂಗಸಸೂರಿನವರು ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ನಿಖರ ಕಾರಣ ಏನು ಎಂಬುವುದು ಸದ್ಯಕ್ಕೆ ತಿಳಿದುಬಂದಿಲ್ಲವಾದರೂ, ಪರಿಯಚದವರಿಂದಲೇ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸಿಂಧನೂರು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ವರದಿ: ಮುಸ್ತಾಫಾ tv8kannada ಲಿಂಗಸುಗೂರು