ರಾಜ್ಯ

CM Siddaramaiah Anger over Budget 2025 : ಕೇಂದ್ರದ ಬಜೆಟ್‌ನಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ: ಸಿ.ಎಂ ಸಿದ್ದರಾಮಯ್ಯ ಕಿಡಿ

ಇಂದು ಘೋಷಣೆ ಮಾಡಿದ ಬಜೆಟ್‌ ನಲ್ಲಿ ( Union Budget 2025) ಬಿಹಾರಕ್ಕೆ ದೊಡ್ಡ ಕೊಡುಗೆ ಘೋಷಣೆ ಮಾಡಲಾಗಿದೆ. ಪರಿಣಾಮ ಇತರೆ ರಾಜ್ಯದ ಸಾಕಷ್ಟು ಸಿಎಂಗಳು ತೀವ್ರ ಕಿಡಿ ಕಾರುತ್ತಿದ್ದಾರೆ. ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ ಎಂಎಸ್‌ಪಿ ಬಗ್ಗೆ ಉಸಿರೇ ಬಿಟ್ಟಿಲ್ಲ.

ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ ಮಾಡಲಾಗಿದೆ ಎಂದು ಸಿಎಂ (CM Siddaramaiah) ಆಕ್ರೋಶದ ನುಡಿಗಳನ್ನು ಆಡಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ. ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ಎಂದು ಸಿಎಂ ಕರೆ ನೀಡಿದ್ದಾರೆ. ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯ ಮಾಡಲಾಗಿದೆ. ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದಿದ್ದಾರೆ.

ಶೇಕಡಾ 70ರಷ್ಟು ಜನಸಂಖ್ಯೆಗೆ ಲಾಭ ಏನು?

ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64 ರಷ್ಟಾಗತ್ತದೆ. ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಃ ದಿನದ ಆದಾಯ 100-150 ರೂಪಾಯಿ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದಿದ್ದಾರೆ.

2024-25 ರ ಪತಿಷ್ಕೃತ ಬಜೆಟ್ 47,16,000 ಕೋಟಿ ಆಗಿತ್ತು. 1,04,000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿಯಷ್ಟಿದೆ. ಇದರಲ್ಲಿ ಬಡ್ಡಿಗೇ 12,70000 ಕೋಟಿ ಹೋಗುತ್ತಿದೆ. ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ ಎಂದು ವಿವರಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ

ಒಟ್ಟಾರೆ ಬಜೆಟ್ ಗಾತ್ರ 50,65,345 ಕೋಟಿ ರೂಪಾಯಿಗಳು. 2024-25ನೇ ಸಾಲಿಗೆ ಸಂಬಂಧಿಸಿದಂತೆ 48.20 ಲಕ್ಷ ಕೋಟಿ ರೂಪಾಯಿಗಳ ಬಜೆಟ್ಟನ್ನು ಮಂಡಿಸಿದ್ದರು. ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ 47.16 ಲಕ್ಷ ಕೋಟಿ ರೂಪಾಯಿಗಳಷ್ಟು ವೆಚ್ಚವಾಗಬಹುದು ಎಂದು ಅಂದಾಜಿಸಿದ್ದಾರೆ. ಅದರಂತೆ ಇದನ್ನು ನೋಡಿದರೆ ಕೇಂದ್ರ ಸರ್ಕಾರಕ್ಕೆ 1.04 ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹ ಕಡಿಮೆಯಾಗುತ್ತದೆ ಎಂದು ಅಂದಾಜು ಮಾಡಿದ್ದಾರೆ. ಹಾಗಾಗಿ, ದೇಶದ ಆರ್ಥಿಕ ಸ್ಥಿತಿ ಸರಿಯಾಗಿಲ್ಲ ಎಂಬುದನ್ನು ಇದು ಸೂಚಿಸುತ್ತದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ 50.65 ಲಕ್ಷ ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ 15,68,936 ಕೋಟಿ ರೂಪಾಯಿಯಷ್ಟು ಸಾಲ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಪ್ರಸ್ತಾಪಿಸಿದ್ದಾರೆ. ಇದೂ ಸೇರಿದರೆ, ನನ್ನ ಅಂದಾಜಿನ ಪ್ರಕಾರ 2026ರ ಮಾರ್ಚ್ ವೇಳೆಗೆ ದೇಶದ ಸಾಲ 202 ರಿಂದ 205 ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟಬಹುದು ನಿರ್ಮಲಾ ಸೀತಾರಾಮನ್ ಅವರೆ ತಮ್ಮ ಬಜೆಟ್ ದಾಖಲೆಗಳಲ್ಲಿ ಹೇಳಿರುವಂತೆ ಈ ವರ್ಷ ಬಡ್ಡಿ ಪಾವತಿಗಾಗಿ 12.7 ಲಕ್ಷ ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತದೆ. ಈ ಬಜೆಟ್‌ನಲ್ಲಿ ವಿತ್ತೀಯ ಕೊರತೆ ಶೇ.4.4 ರಷ್ಟು ಇರಲಿದೆ ಎಂದು ಅಂದಾಜು ಮಾಡಲಾಗಿದೆ. ರೆವಿನ್ಯೂ ಕೊರತೆ ಶೇ.1.5 ರಷ್ಟು ಇರಲಿದೆ ಎಂದು ಅಂದಾಜು ಮಾಡಿದ್ದಾರೆ ಎಂದು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಯಾವ ಪ್ರಯೋಜನವೂ ಇಲ್ಲ

ಮುಖ್ಯವಾಗಿ, ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯಕ್ಕೆ ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಣ್ಣ ಪ್ರಮಾಣದಲ್ಲಿ ಆಂಧ್ರ ಪ್ರದೇಶ ಬಿಟ್ಟರೆ ಉಳಿದ ಯಾವ ರಾಜ್ಯಗಳಿಗೂ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಹನ್ನೊಂದು ಬಜೆಟ್‌ಗಳನ್ನು ನೋಡುತ್ತಾ ಬಂದ ನಮಗೆ ಹನ್ನೆರಡನೇ ಬಜೆಟ್ ಬಗ್ಗೆ ಹೆಚ್ಚಿನ ನಿರೀಕ್ಷೆ ಇರಲಿಲ್ಲ. ಇದು ಅವರೇ ಆಗಾಗ ಹೇಳಿಕೊಳ್ಳುತ್ತಿರು. ವಿಕಸಿತ ಭಾರತದ ಬಜೆಟ್ ಅಲ್ಲ ‘ಅವನತಿ ಭಾರತ’ದ ಬಜೆಟ್ ಎಂದು ಲೇವಡಿ ಮಾಡಿದ್ದಾರೆ.

ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿದ್ದ ಭಾರತವನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಕ್ಕೆ ಎಳೆದೊಯ್ಯುತ್ತಿದೆ. ಇದು ಯಥಾಪ್ರಕಾರ ಕರ್ನಾಟಕದ ಪಾಲಿಗೆ ಮಾತ್ರವಲ್ಲ ಇಡೀ ದೇಶಕ್ಕೆ ನಿರಾಶದಾಯಕ, ನಷ್ಟದಾಯಕ ಮತ್ತು ಹಾನಿಕಾರಕ ಬಜೆಟ್. ಪ್ರಧಾನಿ ಮೋದಿಯವರು ನಮ್ಮದು ಒಕ್ಕೂಟ ವ್ಯವಸ್ಥೆಯ ಭಾರತ ಎನ್ನುವುದನ್ನು ಮರೆತೇ ಬಿಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಎಂದಾಕ್ಷಣ ಪ್ರತಿಯೊಂದು ರಾಜ್ಯದ ಜನತೆ ತಮ್ಮ ರಾಜ್ಯಕ್ಕೆ ಏನಾಧರೂ ಕೊಡುಗೆಗಳಿರಬಹುದೇ ಎಂದು ಆಸೆಯಿಂದ ನೋಡುತ್ತಾರೆ. ಇಂದು ಮಂಡಿಸಿದ ಬಜೆಟ್ ನಲ್ಲಿ ಒಂದೆಡೆ ಬಿಹಾರ ಇನ್ನೊಂದೆಡೆ ಆಂಧ್ರಪ್ರದೇಶ ಬಿಟ್ಟರೆ ಬೇರೆ ರಾಜ್ಯಗಳ ಪ್ರಸ್ತಾವವೂ ಇಲ್ಲ, ಆ ರಾಜ್ಯಗಳಿಗೆ ಸಂಬಂಧಿಸಿದ ಯೋಜನೆಗಳೂ ಇಲ್ಲ

ನಮ್ಮ ರಾಜ್ಯದ ವಿರುದ್ಧ ಸೇಡು

ಈ ಬಾರಿಯ ಬಜೆಟ್ ನಲ್ಲಿ ಕರ್ನಾಟಕದ ಜನತೆ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬ ವಿವರವಾದ ಬೇಡಿಕೆಯ ಪಟ್ಟಿಯನ್ನು ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಿದ್ದೆ. ಬಹುಷಃ ಆ ಬೇಡಿಕೆಯ ಪಟ್ಟಿಯನ್ನು ಅವರು ಕಣ್ಣೆತ್ತಿ ಕೂಡಾ ನೋಡಿದ ಹಾಗಿಲ್ಲ.
ಕಳೆದ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು, ರಾಜ್ಯದ ಜನ ಬಿಜೆಪಿಯನ್ನು ಗೆಲ್ಲಿಸದಿದ್ದರೆ ನರೇಂದ್ರ ಮೋದಿ ಆಶೀರ್ವಾದ ನಿಮಗೆ ಇರುವುದಿಲ್ಲ ಎಂದು ಬೆದರಿಕೆ ಹಾಕಿದ್ದರು. ಕರ್ನಾಟಕದ ಸ್ವಾಭಿಮಾನಿ ಜನತೆ ಆ ಬೆದರಿಕಗೆ ಜಗ್ಗದೆ ಬಿಜೆಪಿಯನ್ನು ಸೋಲಿಸಿದ್ದರು. ಅದರಂತೆ ನರೇಂದ್ರ ಮೋದಿಯವರು ಕರ್ನಾಟಕದ ವಿರುದ್ದ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.

Related Articles

Leave a Reply

Your email address will not be published. Required fields are marked *

Back to top button