ಇತ್ತೀಚಿನ ಸುದ್ದಿ
ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ

ಮಸ್ಕಿ : ಸವಿತಾ ಮಹರ್ಷಿಗಳ ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಗ್ರೇಡ್ ೨ ತಹಶಿಲ್ದಾರರಾದ ಅಶೋಕ ಪವಾರ್ ರವರು
ಹೇಳಿದರು.
ಪಟ್ಟಣದ ತಹಶಿಲ್ದಾರರ ಕಚೇರಿಯ
ಬುದುವಾರ ನಡೆದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ದಲ್ಲಿ ಮಾತನಾಡಿದ,ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೊರಿಸಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಈ ವೇಳೆ,ಸವಿತಾ ಸಮಾಜದವರು ಹಾಗೂ ಅಧಿಕಾರಿಗಳು ಇದ್ದರೂ.
ವರದಿ : ಸಿದ್ದಯ್ಯ ಸ್ವಾಮಿ ಹೆಸರೂರು tv8kannada ಮಸ್ಕಿ