ಇತ್ತೀಚಿನ ಸುದ್ದಿ

ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ದತ್ತ ಬಿಜೆಪಿ ಮಸ್ಕಿ ಯಲ್ಲಿ ವಿಜಯೋತ್ಸವ ಆಚರಣೆ.

ಮಸ್ಕಿ : ದೆಹಲಿಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 27 ವರ್ಷ ನಂತರ ಬಿಜೆಪಿ ದೆಹಲಿಯಲ್ಲಿ ಬಹುಮತದಿಂದ ಬಿಜೆಪಿ ಅಭ್ಯರ್ಥಿಗಳು 45ಕ್ಕೂ ಹೆಚ್ಚಿನ ಸೀಟುಗಳನ್ನು ಪಡೆಯುವ ಮೂಲಕ ಅಧಿಕಾರಕ್ಕೆ ಏರುವ ಹಿನ್ನೆಲೆಯಲ್ಲಿ ಇಂದು ಮಸ್ಕಿ ಬಿಜೆಪಿ ಮಂಡಲ ವತಿಯಿಂದ ಪಟ್ಟಣದ ದೈವದ ಕಟ್ಟಿ ಹತ್ತಿರ ಪಟಾಕಿ ಸಿಡಿಸಿ ಸಿಹಿ ತಿನಿಸುವ ಮೂಲಕ ವಿಜಯೋತ್ಸವ ಆಚರಣೆಮಾಡಿದರು.ಈ ವೇಳೆ,ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ರವರು ಮಾತನಾಡಿ, ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ. ಬಿಜೆಪಿಗೆ ದಾಖಲೆಯ ದಿಗ್ವಿಜಯ ದೊರಕಿಸಿಕೊಟ್ಟ ದೆಹಲಿಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಮಾನ್ಯ ಮೋದಿಜೀ ಅವರನ್ನು ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವೆ ಎಂದರು.ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ. ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda ಜೀ ಹಾಗೂ ಗೃಹ ಸಚಿವರಾದ ಮಾನ್ಯ Amit Shah ಜೀ ಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಹೆಗ್ಗಳಿಕೆಯ ವಿಜಯ ಸಾಧಿಸಿದೆ.ಭಾರತೀಯ ಜನತಾ ಪಾರ್ಟಿ ದೇಶಭಕ್ತಿ ಹಾಗೂ ರಾಷ್ಟ್ರ ಕಟ್ಟುವ ಲಕ್ಷಾಂತರ ಕಾರ್ಯಕರ್ತರನ್ನೊಳಗೊಂಡ ವಿಶ್ವ ದಾಖಲೆ ನಿರ್ಮಿಸಿರುವ ರಾಜಕೀಯ ಪಕ್ಷವಾಗಿದೆ. ಬಿಜೆಪಿಯ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ. ಭವಿಷ್ಯತ್ತಿನಲ್ಲಿ ಇದು ಕರ್ನಾಟಕದಲ್ಲೂ ಪ್ರತಿಫಲಿಸಲಿದೆ. ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ಮಡಿಲಿಗೆ ಸಮರ್ಪಿಸಿರುವ ದೆಹಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಮಾರ್ಗದರ್ಶನದಲ್ಲಿ ನೂತನ ಸರಕಾರ ಕಟಿಬದ್ಧವಾಗಿ ಕೆಲಸ ಮಾಡಲಿದೆ ಎನ್ನುವುದು ದೆಹಲಿ ಚುನಾವಣೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರ ಅಭಯವಾಗಿದೆ. ಈ ಚುನಾವಣೆ ಬಿಜೆಪಿಯ ಕಾರ್ಯಕರ್ತರು ಹಾಗೂ ದೆಹಲಿಯ ಜನತೆಯ ಚಾರಿತ್ರಿಕ ಜಯವಾಗಿದೆ ಅಭಿನಂದನೆಗಳನ್ನು ಬಿಜೆಪಿ ಮಂಡಲದ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ ಅವರು ತಿಳಿಸಿದರು ಈ ಸಂದರ್ಭದಲ್ಲಿ ,ಪಕ್ಷದ ಹಿರಿಯ ಮುಖಂಡರಾದ ಯಲ್ಲೋ ಜಿ ರಾವ್ ಕೋರೆಕರ್, ಅಶೋಕ್ ಸಿಂಗ್ ಠಾಕೂರ್, ಮಂಡಲ ಕಾರ್ಯದರ್ಶಿ ಡಾಕ್ಟರ್ ವೆಂಕಟೇಶ್ ಕೋಳಬಾಳ್, ಡಾಕ್ಟರ್ ಪಂಚಾಕ್ಷರಯ್ಯ ಸ್ವಾಮಿ, ದೊಡ್ಡಪ್ಪ ಬುಳ್ಳ ಸೂಗಣ್ಣ ಬಾಳೆಕಾಯಿ, ಕರಿಬಸಯ್ಯ ಸ್ವಾಮಿ, ರುದ್ರಪ್ಪ ತೊಂತಾಳ, ಯಮುನಪ್ಪ ಬೋವಿ, ಪುರಸಭೆ ಸದಸ್ಯರಾದ ಸುರೇಶ ಹರಸೂರು, ಶಿವರಾಜ್ ಬುಕ್ಕಣ್ಣ, ಮುಸದ್ ಪಾಷಾ ಕೇಶವಮೂರ್ತಿ ಅಮರೇಶ ಸೊಪ್ಪಿಮಠ,ಶರಣೇಗೌಡ ಪೊಲೀಸ್ ಪಾಟೀಲ್ ಮಲ್ಲಿಕಾರ್ಜುನ್ ವೆಂಟಾಪುರ್, ಅಜ್ಮೀರ್ ಮಸ್ಕಿ ಶಾಮೀದ್ ಕಾಳಪ್ಪ ಪತ್ತಾರ್ ಸಂತೋಷ್ ಬಳಿಗೇರ್ ಪಕ್ಷದ ಮುಖಂಡರು ಪಕ್ಷದ ಪದಾಧಿಕಾರಿಗಳು ಪುರಸಭೆ ಸದಸ್ಯರು ಕಾರ್ಯಕರ್ತರು ಇದ್ದರೂ.

ವರದಿ: ಸಿದ್ದಯ್ಯ ಸ್ವಾಮಿ ಹೆಸರೋರು tv8kannada ಮಸ್ಕಿ

Related Articles

Leave a Reply

Your email address will not be published. Required fields are marked *

Back to top button