ಇತ್ತೀಚಿನ ಸುದ್ದಿ
ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಮಸ್ಕಿ ತಾಲೂಕು ಪದಾಧಿಕಾರಿಗಳ ಆಯ್ಕೆ

ಮಸ್ಕಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ರಾಜ್ಯ ಸಮಿತಿ ಬೆಂಗಳೂರು ಇವರ ಆದೇಶದಂತೆ ಜಿಲ್ಲಾಧ್ಯಕ್ಷರ ನಾಗೇಶ್ ಗೌಡ ಅವರ ನೇತೃತ್ವದಲ್ಲಿ ಮಸ್ಕಿ ತಾಲೂಕಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ನೂತನ ಅಧ್ಯಕ್ಷರಾಗಿ ಶ್ರೀ ಹುಸೇನ್ ಸಾಬ್ ಗುರಿಕಾರ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರವೀಂದ್ರ ಕುಂಬಾರ, ಖಜಾಂಚಿ ಶ್ರೀಮತಿ ಭಾಗ್ಯಲಕ್ಷ್ಮಿ, ಜಿಲ್ಲಾ ಪರಿಷತ್ ಸದಸ್ಯರಾಗಿ ಬಸವರಾಜ್ ಬಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶ್ರೀ ನಾಗೇಶ್ ಗೌಡ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ತಾಲೂಕಿನ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆ ನಿವಾರಿಸುವ ಸಲುವಾಗಿ ಸಂಘಟನೆ ಬಲಪಡಿಸಲು ತಿಳಿಸಿದ್ದಾರೆ.
ವರದಿ : ಸಿದ್ದಯ್ಯ ಸ್ವಾಮಿ ಹೆಸರೂರು tv8kannada ಮಸ್ಕಿ