SHOCKING : ಗಂಗಾ ನದಿಯಲ್ಲಿ ಹೆಚ್ಚಾಯ್ತು ಮಲದಲ್ಲಿರುವ ಬ್ಯಾಕ್ಟೀರಿಯಾ! ಇದು ಪುಣ್ಯ ಸ್ನಾನಕ್ಕೆ ಯೋಗ್ಯವಲ್ಲ ಎಂದ ಎನ್ಜಿಟಿ

ಪ್ರಯಾಗ್ ರಾಜ್ : ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಕಲುಷಿತವಾಗಿದೆ ಎಂದು ವರದಿ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಚ್ಚರಿಯ ವರದಿಯನ್ನು ಮಾಡಿದೆ.
ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದಂತೆ ಮಹಾ ಕುಂಭಮೇಳದ ಸಮಯದಲ್ಲಿ ಮಲ ಕೋಲಿಫಾರ್ಮ್ ಬ್ಯಾಕ್ಟೀರಿಯಾದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಹೇಳಿತ್ತು. ಆದರೆ ಇದೀಗ ಗಂಗಾ ನದಿಯಲ್ಲಿ ಹೆಚ್ಚಿನ ಮಟ್ಟದ ಮಲ ಬ್ಯಾಕ್ಟೀರಿಯಾದ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಕಳವಳ ವ್ಯಕ್ತಪಡಿಸಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯಂತೆ, ಜನವರಿ 12-13 ರಂದು ನಡೆಸಿದ ಶೋಧನೆಯಲ್ಲಿ ಗಂಗಾ ನದಿ ನೀರಿನ ಗುಣಮಟ್ಟವು ಜೀವರಾಸಾಯನಿಕ ಆಮ್ಲಜನಕದ ಬೇಡಿಕೆ ಅನುಗುಣವಾಗಿಲ್ಲ, ಅಲ್ಲದೇ ಪವಿತ್ರ ಸ್ನಾನ ಮಾಡಲು ಯೋಗ್ಯವಾಗಿಲ್ಲ ಎಂದು ತಿಳಿಸಿತ್ತು.
ಅಲ್ಲದೇ ಗಂಗಾ ನದಿಯಲ್ಲಿ ಫೆಕಲ್ ಕೋಲಿಫಾರ್ಮ್ ಹೆಚ್ಚಾದ ಹಿನ್ನಲೆ ಈ ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮಕ್ಕೆ ಸಂಬಂಧಪಟ್ಟಂತೆ ಹಲವಾರು ಕಾಯಿಲೆಗಳು ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
https://x.com/jasmvk/status/1889450063908294826?ref_src=twsrc%5Etfw%7Ctwcamp%5Etweetembed%7Ctwterm%5E1889450063908294826%7Ctwgr%5E62842b34ff724628bbf5345dbd6c3291d2847e89%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಮಹಾ ಕುಂಭ ಮೇಳದ ವಿಶೇಷ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವುದರಿಂದ ಮಲ ಸಾಂದ್ರತೆ ಹೆಚ್ಚಾಗುತ್ತದೆ ಎಂದು ವರದಿಯಾಗಿದೆ. ಅಲ್ಲದೇ ಈ ಪ್ರದೇಶದಲ್ಲಿನ ಒಳಚರಂಡಿ ಸಂಸ್ಕರಣಾ ಘಟಕಗಳು ಕೂಡ ನದಿಗೆ ನೀರನ್ನು ಬಿಡುವುದರಿಂದ ನೀರು ಕಲುಷಿತವಾಗಿದೆ ಎಂದು ತಿಳಿದು ಬಂದಿದೆ.