ಕ್ರೀಡೆ

ಇಂದಿನಿಂದ ಚಾಂಪಿಯನ್ಸ್ ಟ್ರೋಫಿ ಹಬ್ಬ: ಪಾಕಿಸ್ತಾನ-ನ್ಯೂಜಿಲೆಂಡ್ ಸೆಣಸಾಟ, ಪ್ಲೇಯಿಂಗ್ 11, ಪಿಚ್ ರಿಪೋರ್ಟ್, ಹವಾಮಾನ ವರದಿ

ಕರಾಚಿ: ದಿನಕ್ಕೊಂದು ವಿವಾದಗಳ ನಡುವೆಯೇ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಟೂರ್ನಿ ಆಯೋಜನೆಗೆ ಸಂಬಂಧಿಸಿ ಕೆಲಸಗಳು ಕೈಗೆತ್ತಿಕೊಂಡ ಕ್ಷಣದಿಂದ ಎದ್ದಿದ್ದ ವಿವಾದಗಳು ಒಂದೆರಡಲ್ಲ. ಇಂದಿನಿಂದ (ಫೆ 19) 9ನೇ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿ ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ-ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಲಿವೆ.

ಈ ಪಂದ್ಯಕ್ಕೆ ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.ಉಭಯ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಪಂದ್ಯ ಆರಂಭವಾಗುವ ಮುನ್ನವೇ ನ್ಯೂಜಿಲೆಂಡ್‌ಗೆ ಆಘಾತವಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ಕಾರಣ ಲಾಕಿ ಫರ್ಗುಸನ್ ಇಡೀ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಗೆ ಕೈಲಿ ಜೆಮಿಸನ್ ತಂಡವನ್ನು ಸೇರ್ಪಡೆಗೊಂಡಿದ್ದಾರೆ. ಮತ್ತೊಂದೆಡೆ, ಗಾಯದಿಂದಾಗಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ತ್ರಿಕೋನ ಸರಣಿಯ ಹೆಚ್ಚಿನ ಭಾಗವನ್ನು ಕಳೆದುಕೊಂಡಿದ್ದ ವೇಗಿ ಹ್ಯಾರಿಸ್ ರೌಫ್ ಫಿಟ್ ಆಗಿರುವುದು ಪಾಕಿಸ್ತಾನ ತಂಡಕ್ಕೆ ಹೊಸ ಉತ್ಸಾಹ ನೀಡಿದೆ.ಚಾಂಪಿಯನ್ಸ್ ಟ್ರೋಫಿಯ ಪಂದ್ಯಕ್ಕೂ ಮುನ್ನ ಈ ಎರಡೂ ತಂಡಗಳು ತ್ರಿಕೋನ ಸರಣಿ ಫೈನಲ್ನಲ್ಲಿ ಮುಖಾಮುಖಿಯಾಗಿದ್ದವು. ಫೈನಲ್ನಲ್ಲಿ ಗೆದ್ದಿದ್ದ ಕಿವೀಸ್ ತಂಡವನ್ನು ಮಣಿಸಿ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಭರ್ಜರಿ ಅಭಿಯಾನ ಆರಂಭಿಸುವ ಲೆಕ್ಕಾಚಾರದಲ್ಲಿದೆ ಪಾಕಿಸ್ತಾನ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮುಖಾಮುಖಿಯಾದ ಉಭಯ ತಂಡಗಳಲ್ಲಿ ಪಾಕಿಸ್ತಾನವೇ ಮೇಲುಗೈ ಸಾಧಿಸಿದೆ. ಮುಖಾಮುಖಿಯಾದ 118 ಪಂದ್ಯಗಳ ಪೈಕಿ 61ರಲ್ಲಿ ಗೆದ್ದಿದೆ. ನ್ಯೂಜಿಲೆಂಡ್ 53ರಲ್ಲಿ ಜಯಿಸಿದೆ. ಪಾಕಿಸ್ತಾನ ಕಳೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಕಿವೀಸ್ 2000ರಲ್ಲಿ ಗೆದ್ದಿದ್ದೇ ಕೊನೆ. ಉಭಯ ತಂಡಗಳು ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿವೆ.

ಪಾಕಿಸ್ತಾನ vs ನ್ಯೂಜಿಲೆಂಡ್ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ?

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಇಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಟಾಸ್ ನಡೆಯಲಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ನೆಟ್‌ವರ್ಕ್ 18 ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಜಿಯೋ ಹಾಟ್ಸ್ಟಾರ್ನಲ್ಲೂ ಪಂದ್ಯದ ನೇರ ಪ್ರಸಾರವನ್ನು ಕಣ್ತುಂಬಿಕೊಳ್ಳಬಹುದು.

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ಪೂರ್ಣ ತಂಡಗಳು

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ನಾಯಕ & ವಿಕೆಟ್ ಕೀಪರ್), ಬಾಬರ್ ಅಜಮ್, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಷ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಅಮ್ ಶಹದಿ, ಶಾಹಿನ್ ಶಹದಿ.

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಕೈಲ್ ಜೆಮಿಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ವಿಲ್ ಒ’ರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್ , ವಿಲ್ ಯಂಗ್, ಜಾಕೋಬ್ ಡಫಿ.

ಪಾಕಿಸ್ತಾನದ ಸಂಭಾವ್ಯ ಪ್ಲೇಯಿಂಗ್ 11

ಫಖರ್ ಜಮಾನ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ, ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್.

ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ 11

ವಿಲ್ ಯಂಗ್, ಡೆವೊನ್ ಕಾನ್ವೆ, ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ಕೈಲ್ ಜೆಮಿಸನ್.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಿಚ್ ವರದಿ

ರಾಷ್ಟ್ರೀಯ ಸ್ಟೇಡಿಯಂ ಪಿಚ್​​ ಬ್ಯಾಟರ್​ಗಳ ಸ್ಪರ್ಗ ಎನ್ನಬಹುದು. ಹೀಗಾಗಿ ಹೈ ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದು. ಪಿಚ್​​ ವೇಗಿಗಳಿಗೆ ನೆರವಾದರೂ ಪಂದ್ಯ ಮುಂದುವರೆದಂತೆ ಇಲ್ಲಿನ ಮೇಲ್ಮೈ ಬ್ಯಾಟರ್​ಗಳಿಗೆ ಅನುಕೂಲವಾಗಿರುತ್ತದೆ. ಮೇಲ್ಮೈ ಕ್ಷೀಣಿಸಲು ಪ್ರಾರಂಭಿಸಿದ ಸಂದರ್ಭದಲ್ಲಿ ಸ್ಪಿನ್ನರ್‌ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಬಲ್ಲರು.

ಕರಾಚಿಯ ಹವಾಮಾನ ವರದಿ

ಬುಧವಾರದ ಕರಾಚಿಯ ಹವಾಮಾನ ಮುನ್ಸೂಚನೆಯ ಪ್ರಕಾರ ಪ್ರಕಾಶಮಾನವಾದ ಮತ್ತು ಸಂಪೂರ್ಣ ಬಿಸಿಲು ಇರುತ್ತದೆ. ತಾಪಮಾನವು 20 ಡಿಗ್ರಿವರೆಗೆ ಏರಿಳಿತಗೊಳ್ಳುವ ಸಾಧ್ಯತೆಯಿದೆ. ಇದು ಎರಡೂ ತಂಡಗಳಿಗೆ ಸೂಕ್ತವಾದ ಆಟದ ಪರಿಸ್ಥಿತಿಯಾಗಲಿದೆ.

ವರದಿ ಮತ್ತು ಮಾಹಿತಿ: ಮೊಹಮದ್ ಶಫಿ ಸ್ಪೋರ್ಟ್ಸ್ ಬ್ಯೂರೋ tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button