ಭಾಷಾಂಧ ಮರಾಠಿಪುಂಡರುಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ತಕ್ಕ ಶಾಸ್ತ್ರಿ ನೀಡಬೇಕಾಗುತ್ತದೆ. ದುಗರಾಜ ವಟಗಲ್ ಎಚ್ಚರಿಕೆ.

ಮಸ್ಕಿ : ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರವೆ ತಾಲ್ಲೂಕು ಅಧ್ಯಕ್ಷ ದುಗರಾಜ ವಟಗಲ್ ರವರು ಎಚ್ಚರಿಕೆ ನೀಡಿದರು.
ಮಾಧ್ಯಮ ರೊಂದಿಗೆ ಮಾತನಾಡಿ
ಬೆಳಗಾವಿ ಪೊಲೀಸರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬನನ್ನೂ ಬಂಧಿಸಿ ಜೈಲಿಗೆ ಕಳುಹಿಸಬೇಕು.
ಇಲ್ಲವಾದಲ್ಲಿ ಇದರ ಪರಿಣಾಮ ಭೀಕರವಾಗುತ್ತದೆ.
ಕನ್ನಡಿಗರು ಸೌಹಾರ್ದಪ್ರಿಯರು, ಶಾಂತಿಪ್ರಿಯರು, ಹಾಗಂದ ಮಾತ್ರಕ್ಕೆ ನಮ್ಮ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಭಾಷಾಂಧರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಕಿತ್ತುಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದ ಮೇಲೆ ಹತಾಶರಾಗಿರುವ ಭಾಷಾಂಧ ಮರಾಠಿಪುಂಡರು ಈಗ ಕನ್ನಡಿಗರ ಮೇಲೆ ಕೈಮಾಡುವ ನೀಚ ಕೃತ್ಯಕ್ಕೆ ಇಳಿದಿದ್ದಾರೆ. ಪೊಲೀಸರು ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.