ವಿಶ್ವವಿದ್ಯಾನಿಲಯವನ್ನು ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ವಿಲೀನಗೊಳಿಸಬಾರದೆಂದು ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ(ಪಾಪು) ಒತ್ತಾಯಿಸಿದರು.

ಚಾಮರಾಜನಗರ: ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಮಾತನಾಡಿದ ಅವರು, ಹಿಂದುಳಿದ ಚಾಮರಾಜನಗರ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಪಡೆಯಲು ಈ ವಿಶ್ವವಿದ್ಯಾನಿಲಯವನ್ನು ಅವಲಂಬಿಸಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವಿಶ್ವವಿದ್ಯಾನಿಲಯವನ್ನು ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ವಿಲೀನಗೊಳಿಸಲು ಹೇಳಿಕೆ ನೀಡಿರುವುದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಆರೋಪಿಸಿದರು.
ಚಾಮರಾಜನಗರ ಜಿಲ್ಲೆಯಾಗಿ 25 ವರ್ಷಗಳು ಕಳೆದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಜಿಲ್ಲೆ ಅಭಿವೃದ್ಧಿಗೊಂಡಿಲ್ಲ, ಜಿಲ್ಲೆಯ ಅಭಿವೃದ್ಧಿಗೆ ಶೈಕ್ಷಣಿಕ ಪ್ರಗತಿ ಬಹಳ ಮುಖ್ಯವಾಗಿದೆ, ಈ ನಿಟ್ಟಿನಲ್ಲಿ ಸರ್ಕಾರ ಚಾಮರಾಜನಗರ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದು, ಇದರಿಂದ ಕಾಡಂಚಿನ ಮತ್ತು ಗುಡ್ಡಗಾಡು ಪ್ರದೇಶದಲ್ಲಿರುವ ಗಿರಿಜನರು ಮತ್ತು ಹಿಂದುಳಿದ ವರ್ಗದವರು ಶಿಕ್ಷಣ ಪಡೆಯಲು ಅನುಕೂಲವಾಗಿತ್ತು ಎಂದು ತಿಳಿಸಿದರು, ಅಲ್ಲದೆ ಚಾಮರಾಜನಗರ ವೈದ್ಯಕೀಯ ಕಾಲೇಜಿನಲ್ಲಿ ಬೋಧಕರು ಮತ್ತು ಬೋಧಕೇತರ ಹುದ್ದೆಗಳು ಸಾಕಷ್ಟು ಖಾಲಿ ಬಿದ್ದಿವೆ, ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದ್ದು, ಸರ್ಕಾರ ವೈದ್ಯಕೀಯ ಕಾಲೇಜನ್ನು ವಿಲೀನಗೊಳಿಸುತ್ತದೆಯೇ? ಎಂದು ವೆಂಕಟರಮಣಸ್ವಾಮಿ ಪ್ರಶ್ನೆ ಮಾಡಿದರು.
ಮುಂದಿನ ತಿಂಗಳು ಮಹದೇಶ್ವರ ಬೆಟ್ಟಕ್ಕೆ ಬರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೂ ಚಾಮರಾಜನಗರ ವಿಶ್ವವಿದ್ಯಾನಿಲಯ ಉಳಿಸುವಂತೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ರಿಂದ ಫೆ.22ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯುವ ವಿಶ್ವವಿದ್ಯಾನಿಲಯ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಹೀಗಾಗಿ ಪ್ರಗತಿಪರ ಸಂಘಟನೆಯ ಮುಖಂಡರು, ವಿದ್ಯಾರ್ಥಿಗಳು ಪೋಷಕರು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ,ನಿಜಧ್ವನಿ ಗೋವಿಂದರಾಜು, ಮುಖಂಡರಾದ ರಂಗಸ್ವಾಮಿ, ಕೆಂಪರಾಜು, ರಾಜಣ್ಣ, ಗೌರಿಶಂಕರ್ ಇದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ