ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವಹೇಳನ: ವ್ಯಕ್ತಿ ಬಂಧನಕ್ಕೆ ದೂರು

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವ್ಯಾಚ್ಯ ಶಬ್ದ ಬಳಸಿ ನಿಂದನೆ ಮಾಡಿದ ಚಾಮರಾಜನಗರ ಪಟ್ಟಣದ ನಿವಾಸಿ ಸುರೇಶ್ ವಾಜಪೇಯಿ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕೆ.ಎಸ್.ರೇವಣ್ಣ ಅವರು ಪೊಲೀಸರಿಗೆ ದೂರು ನೀಡಿದರು.

ನಗರದ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಆರ್.ವೆಂಕಟೇಶ್ ಅವರಿಗೆ ದೂರು ನೀಡಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸುರೇಶ್ ವಾಜಪೇಯಿ ಸಾರ್ವಜನಿಕವಾಗಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದು ಅಪಮಾನವಾಗಿದೆ ಆದ್ದರಿಂದ ಈ ಕೂಡಲೇ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಅಹಿಂದ ಅಹಿಂದ ಸಂಘಟನೆಯ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅಪ್ಸರ್ ಪಾಷ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ವಕೀಲ ಮಹೇಶ್, ಚಾಮರಾಜನಗರ ತಾಲೂಕು ಅಧ್ಯಕ್ಷ ಬೀರೇಶ್, ತೌಶಿಪ್ ಇದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ