ಇತ್ತೀಚಿನ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ..Tejasvi Surya

ಬೆಂಗಳೂರು : (Tejasvi Surya ) ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯನ್ನು ಈ ಜೋಡಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ಗವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ.

ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.

ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button