ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸಿಗ್ನಲ್ ಲೈಟ್ ಅಳವಡಿಸಲು ಒತ್ತಾಯ

ಚಾಮರಾಜನಗರ; ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾವು ನೋವು ಸಂಭವಿಸುತ್ತಿದೆ, ಇದಕ್ಕೆ ಅನೇಕ ಕಾರಣಗಳಿದ್ದು, ಈ ಬಗ್ಗೆ ಸರ್ಕಾರ ಮುಂಜಾಗ್ರತೆ ಕ್ರಮಕೈಗೊಳ್ಳಬೇಕೆಂದು ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಜಿಲ್ಲಾಅಧ್ಯಕ್ಷ ಹೆಚ್.ಎಂ. ಶಿವಣ್ಣ ಮಂಗಲ ಹೊಸೂರು ಒತ್ತಾಯಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ಮುಖ್ಯ ಅಭಿಯಂತರರು ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಚಾಮರಾಜನಗರ ನಗರಸಭೆ ವ್ಯಾಪ್ತಿಯ ಗಡಿಯಂಚಿಗೆ ಬರುವ ಸೋಮವಾರಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಂಗ್ ರೋಡ್ ಹಾದು ಹೋಗುತ್ತಿದ್ದು, ಈ ಸ್ಥಳದಲ್ಲಿ ಯಾವುದೇ ಸಿಗ್ನಲ್ ಲೈಟ್ ಹಾಗೂ ಇಲ್ಲದೆ ಇರುವುದರಿಂದ ಕತ್ತಲೆ ಉಂಟಾಗಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳಿಂದ ದಿನನಿತ್ಯ ನೂರಾರು ಬಾರಿ ವಾಹನಗಳು ಹಗಲು ರಾತ್ರಿ ಸಂಚರಿಸುತ್ತವೆ ಇಂತಹ ಸಂದರ್ಭದಲ್ಲಿ ಎರಡು ರಸ್ತೆಗಳಿಂದ ವಾಹನ ಸಂಚರಿಸುವಾಗ ಅಪಘಾತ ಸಂಭವಿಸಿದೆ ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಂಡು ಸೋಮವಾರಪೇಟೆ ರಿಂಗ್ ರಸ್ತೆಯಲ್ಲಿ ಹಾಗೂ ದೊಡ್ಡರಾಯನಪೇಟೆಯಲ್ಲಿ ಮುಂದೆ ಸಂಭವಿಸಬಹುದಾದ ಬಗ್ಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಮಹಾಸಭಾದ ಚಂದಕವಾಡಿ ಹೋಬಳಿ ಘಟಕದ ಅಧ್ಯಕ್ಷ ಮಂಜುನಾಥ್ ವಿಶ್ವಕರ್ಮ, ಮುಖಂಡ ಸೋಮವಾರಪೇಟೆ ನಾಗೇಂದ್ರ ವಿಶ್ವಕರ್ಮ ಇದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ