ರಾಜ್ಯ ವಕ್ಫ ಬೋರ್ಡ್ ಗೆ ಕಲಬುರಗಿಯ ಅಲಿ ಅಲ್ ಹುಸೇನಿ ಅಧ್ಯಕ್ಷ

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನೂತನ ರಾಜ್ಯಾಧ್ಯಕ್ಷರಾಗಿ ಕಲಬುರಗಿಯ ಹಜರತ್ ಖ್ವಾಜಾ ಬಂದಾನವಾಝ್ ದರ್ಗಾದ ಸಜ್ಜಾದ ನಶೀನ್ ಸಯ್ಯದ ಮುಹಮ್ಮದ ಅಲಿ ಅಲ್ ಹುಸೈನಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾದರು.
ಅಧಿಕಾರ ಸ್ವೀಕರಿಸಿದ ಜನಾಬ ಸಯ್ಯದ್ ಮುಹಮ್ಮದ ಅಲಿ ಅಲ ಹುಸ್ಸೇನಿ ಎಲ್ಲ ಸದಸ್ಯರ ಜೊತೆಗೆ ಒಳ್ಳೆಯ ಸಂಬಂಧ ಹೊಂದಿದ್ದು, ಅವರೆಲ್ಲರ ಜೊತೆಗೂಡಿ ನಿರ್ಧಾರ ಕೈಗೊಳ್ಳುತ್ತೆನೆ. ಮುಸ್ಲಿಂ ಸಮುದಾಯದ ಏಳಿಗೆಗಾಗಿ ಶ್ರಮಿಸುವೆ. ವಕ್ತ ಮಂಡಳಿಯನ್ನು ಅಭಿವೃದ್ಧಿಪಡಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.
ವಕ್ಫ ಮಂಡಳಿ ಒಂದು ಧಾರ್ಮಿಕ ಸಂಸ್ಥೆಯಾಗಿದ್ದು ಇದರ ವಿರುದ್ಧ ಯಾವುದೇ ಚ್ಯುತಿ ಬರಲಾರದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು. ನಾನು ಯಾರ ವಿರೋಧಿಯೂ ಅಲ್ಲ. ನಾನು ಕೆಲಸ ಮಾಡುವಾಗ ಎಲ್ಲರಿಗೂ ಗೊತ್ತಾಗುತ್ತದೆ ಎಂದರು. ಸಮುದಾಯ ಹೇಳಿಕೊಳ್ಳುವಂತಹ ಕೆಲಸವನ್ನು ಪ್ರಾಮಾಣಿಕವಾಗಿ ನನ್ನ ಅವಧಿಯಲ್ಲಿ ಮಾಡಿ ತೋರಿಸುತ್ತೇನೆ. ಮುಸ್ಲಿಂ ಸಮುದಾಯ ನನ್ನ ಮೇಲಿಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸವನ್ನು ಮಾಡುವುದಾಗಿ ತಿಳಿಸಿದರು.
ಅಲ್ಲದೆ ವಕ್ಫ ಬೋರ್ಡ್ ಅಧ್ಯಕ್ಷನಾಗಲು ಕಾರಣಿಭೂತರಾದ ನನಗೆ ಪ್ರೋತ್ಸಾಹಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ತಿಳಿಸುವೆ. ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಒಳಗೊಂಡಂತೆ ಎಲ್ಲ ಕಾಂಗ್ರೆಸ್ ನಾಯಕರಿಗೆ ನನ್ನ ಧನ್ಯವಾದಗಳು ತಿಳಿಸುವೆ ಎಂದರು.