WPL 2025 ಫೈನಲ್: ಸತತ ಮೂರನೇ ಬಾರಿಯೂ ಎಡವಿದ ಡೆಲ್ಲಿ; ಮುಂಬೈಗೆ ಚಾಂಪಿಯನ್ ಕಿರೀಟ

ಮುಂಬೈ :ನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ನ ಮೂರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಉಭಯ ತಂಡಗಳು ಈ ಲೀಗ್ನಲ್ಲಿ ಫೈನಲ್ ಪಂದ್ಯ ಆಡುತ್ತಿದ್ದದ್ದು ಇದು ಎರಡನೇ ಭಾರಿ.
ಇದಕ್ಕೂ ಮುನ್ನ ಈ ಲೀಗ್ನ ಮೊದಲ ಆವೃತ್ತಿಯಲ್ಲಿ ಡೆಲ್ಲಿ ತಂಡವನ್ನು ಮಣಿಸಿದ್ದ ಮುಂಬೈ ಚೊಚ್ಚಲ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಹೀಗಾಗಿ ಮೂರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ತೀರ ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಮೂರನೇ ಬಾರಿಗೆ ಫೈನಲ್ನಲ್ಲಿ ಸೋತು ಚಾಂಪಿಯನ್ ಪಟ್ಟದಿಂದ ವಂಚಿತವಾಯಿತು.
ಮುಂಬೈ ತಂಡವು ನಾಯಕಿ ಕೌರ್ (66;44ಎ, 4X9, 6X2) ಮತ್ತು ಬ್ರಂಟ್ (30; 28ಎ, 4X4) ಅವರ ಆಟದ ಬಲದಿಂದ 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 149 ರನ್ ಗಳಿಸಿತ್ತು.

150 ರನ್ ಗುರಿ ಬೆನ್ನತ್ತಿದ ಡೆಲ್ಲಿ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 141 ರನ್ ಗಳಿಸಲಷ್ಟೇ ಶಕ್ತವಾಯಿತು.
2023ರಲ್ಲಿ ಮುಂಬೈ ತಂಡವು ಚೊಚ್ಚಲ ಡಬ್ಲ್ಯುಪಿಎಲ್ ಪ್ರಶಸ್ತಿ ಜಯಿಸಿತ್ತು. ಇತ್ತ ಸತತ 3ನೇ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಕನಸು ಭಗ್ನಗೊಂಡಿತು.
ವರದಿ: ಮೊಹಮದ್ ಶಫಿ ಸ್ಪೋರ್ಟ್ಸ್ ಬ್ಯೂರೋ tv8kannada ಬೆಂಗಳೂರು