ಇತ್ತೀಚಿನ ಸುದ್ದಿ
DEBENDRA PRADHAN: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ- ಅಂತಿಮ ನಮನ ಸಲ್ಲಿಸಿದ ಮೋದಿ: VIDEO

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಂದೆ ಮತ್ತು ಮಾಜಿ ಕೇಂದ್ರ ಸಚಿವ ಡಾ. ದೇಬೇಂದ್ರ ಪ್ರಧಾನ್ ಅವರು ಇಂದು ನಿಧನರಾದರು.
84 ವರ್ಷ ವಯಸ್ಸಾಗಿರುವ ದೇಬೇಂದ್ರ ಪ್ರಧಾನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ನವದೆಹಲಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಬೆಳಗ್ಗೆ 10:30 ರ ಸುಮಾರಿಗೆ ಅವರು ಕೊನೆಯುಸಿರೆಳೆದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಾ. ಪ್ರಧಾನ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು ಮತ್ತು ಕುಟುಂಬಕ್ಕೆ ಸಂತಾಪ ಸೂಚಿಸಿದರು.
ಧರ್ಮೇಂದ್ರ ಪ್ರಧಾನ್ ಅವರ ತಂದೆ ದೇಬೇಂದ್ರ ಪ್ರಧಾನ್ ಕೂಡ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಅವರು ಸಚಿವರೂ ಆಗಿದ್ದರು. ಅವರ ಪುತ್ರ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.