ಇತ್ತೀಚಿನ ಸುದ್ದಿ
ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ.

ಮಸ್ಕಿ : ಹಾಲು, ಮೊಸರು ಸೇರಿದಂತೆ ಪೆಟ್ರೋಲ್ ಡಿಸೇಲ್ ದರ ಏರಿಕೆ ವಿರೋಧಿಸಿ ಮಸ್ಕಿ
ಬಿಜೆಪಿ ಮಂಡಲ
ವತಿಯಿಂದ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರದ ವಿರುದ್ದ ದಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ರವರು
ಮಾತನಾಡಿ , ಕಾಂಗ್ರೆಸ್ ಸರಕಾರ
ಪ್ರೆಟೋಲ್, ಡೀಸೆಲ್ ಬೆಲೆ ಸೇರಿದಂತೆ ಅಗತ್ಯ ವಸ್ತುಗಳನ್ನು
ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿ ಲೂಟಿ ಹೊಡೆಯಲು ಆರಂಭಿಸಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಹೇಳೋದೊಂದು ಮಾಡೋದೊಂದಾಗಿದೆ.
ಮುಖ್ಯಮಂತ್ರಿಗಳು ಸುಳ್ಳು ಹೇಳುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ, ಹಿರಿಯ ನಾಯಕರು, ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.