ಇತ್ತೀಚಿನ ಸುದ್ದಿ
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ : ಮಲ್ಲಪ್ಪ ಎಸ್ ಗೋನಾಳ

ಮಸ್ಕಿ : ತಾಲೂಕಿನ ಗೋನಾಳ ಗ್ರಾಮದಲ್ಲಿ ಸಂವಿಧಾನ ಶಿಲ್ಪ ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಯನ್ನು ಆಚರಣೆ ಮಾಡಲಾಯಿತು.
ಈ ವೇಳೆ, ದಲಿತ ಸಂಘರ್ಷ ಸಮಿತಿ
ಸಂಯೋಜಕ ಬಣದ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ ಎಸ್ ಗೋನಾಳ ರವರು ಮಾತನಾಡಿ,, ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ ಎಂದರು.
ಈ ಸಂದರ್ಭದಲ್ಲಿ, ಊರಿನ ಪ್ರಮುಖ ಮುಖಂಡರು,
ಮಕ್ಕಳು ಸೇರಿದಂತೆ ,ಬಾಬಾ ಸಾಹೇಬ್ ಅಂಬೇಡ್ಕರ್ ಅಭಿಮಾನಿಗಳು ಇದ್ದರೂ.