ಅಂಬೇಡ್ಕರ್ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಲು ಕರೆ: ಸಿ.ಎಂ. ಶಿವಣ್ಣ

ಚಾಮರಾಜನಗರ; ಅಂಬೇಡ್ಕರ್ ಅವರ ಆದರ್ಶ ತತ್ವಗಳ ಪಾಲನೆ ಎಲ್ಲರ ಮುಖ್ಯ ಕರ್ತವ್ಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ತಿಳಿಸಿದರು.
ನಗರದ ಅಂಬೇಡ್ಕರ್ ಬಡಾವಣೆಯ ಹೆಬ್ಬಾಗಿಲು ಬಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಏರ್ಪಡಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಸಮಾರಂಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕೇಕ್ ಕತ್ತರಿಸಿ ನಂತರ ಮಾತನಾಡಿದ ಅವರು ಶೋಷಿತರು ಹಾಗೂ ದೀನದಲಿತರ ಪರ ದನಿ ಎತ್ತುವ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಅಲ್ಲದೆ ಅವರು ಹೇಳಿರುವ ಶಿಕ್ಷಣ, ಸಂಘಟನೆ, ಹೋರಾಟದ ಹಾದಿ ನಮ್ಮೆಲ್ಲರ ಕರ್ತವ್ಯವಾಗಬೇಕು, ತಮ್ಮ ಮಕ್ಕಳಿಗೆ ಹೆಚ್ಚು ಹೆಚ್ಚು ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗಡಿಯ ಯಜಮಾನರಾದ ನಾಗರಾಜು, ಮಾದೇವಯ್ಯ, ಮಲ್ಲಿಕಾರ್ಜುನ, ದಲಿತ ಸಂಘರ್ಷ ಸಮಿತಿಯ ಮಧು, ಸಿ.ಎನ್. ಮಂಜೇಶ್, ಆಟೋ ಉಮೇಶ್, ಹಾಸ್ಪಿಟಲ್ ಉಮೇಶ್, ಪ್ರಕಾಶ್, ಸಿದ್ದರಾಜು, ಮಹದೇವಸ್ವಾಮಿ ಎಲೆಕ್ಟ್ರಿಷಿಯನ್, ಸಿದ್ದಪ್ಪ(ಗುಂಡಿ), ಮಹೇಶ್ ಕುಮಾರ್ ಸೇರಿದಂತೆ ಇತರರು ಇದ್ದರು.

ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ