ಜ.24 ರಂದು ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ

ಚಾಮರಾಜನಗರ: ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭವು ಜ.24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿದೆ ಎಂದು ಭಾರತೀಯ ಭೌದ್ಧ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜು ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಾಡಿನ ಬಿಕ್ಕು ಮತ್ತು ಬಿಕ್ಕುಣಿ ಸಂಘದ ಭಂತೇಜಿ ಭೋದಿದತ್ತ ಅವರ ನೇತೃತ್ವದಲ್ಲಿ ಪಂಚಶೀಲ ಪಾದಯಾತ್ರೆ ಕಳೆದ ನ.15 ರಂದು ಸನ್ನತಿಯಿಂದ ಆರಂಭವಾಗಿ ಹಲವು ಜಿಲ್ಲೆಗಳಲ್ಲಿ ಸಂಚರಿಸಿ ಜ.24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ತಲುಪಲಿದೆ. ಅಂದು ಬಹಿರಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಬೌದ್ಧ ಸಮುದಾಯದ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರೆಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ಸನ್ನತಿ ಅಭಿವೃದ್ಧಿ ಪಾಧಿಕಾರದ ಯೋಜನೆಯನ್ನು ಆಂಧ್ರದ ಬುದ್ಧವನ ಮಾದರಿಯಲ್ಲಿ ಕನಿಷ್ಠ 200 ಎಕರೆ ಪ್ರದೇಶದಲ್ಲಿ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಸನ್ನತ್ತಿಯನ್ನು 7 ಸ್ಟಾರ್ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಬೇಕು. ಪರಿಶಿಷ್ಟ ಜಾತಿಯ ಬೌದ್ಧರ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ, ಬೌದ್ಧರ ಸರ್ವಾಂಗಣ ಅಭಿವೃದ್ಧಿ ಹಾಗೂ ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗಾಗಿ ಕನಿಷ್ಠ 1000 ಕೋಟಿ ಅನುದಾನ ಈ ಬಜೆಟ್ ನಲ್ಲಿ ಒದಗಿಸಬೇಕು.ಪ್ರತಿ ವರ್ಷ ಮಹಾತ್ಮ ಗೌತಮ್ ಬುದ್ಧ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂಬ ಹಲವಾರು ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.
ಸಮಾರಂಭದಲ್ಲಿ ರಾಜ್ಯದ ಸಮಸ್ತ ಬಿಕ್ಕು ಸಂಘ ಬೌದ್ಧ ಸಂಸ್ಥೆಗಳು, ಎಲ್ಲಾ ದಲಿತ ಸಂಘರ್ಷ ಸಮಿತಿಗಳ ರಾಜ್ಯ ಸಂಚಾಲಕರು, ಮುಖಂಡರು, ನೌಕಾರರು, ವಿದ್ಯಾರ್ಥಿ ಯುವಜನರು, ಕಾರ್ಮಿಕರು, ಮಹಿಳೆಯರು ಮತ್ತು ಪ್ರಗತಿಪರ ಚಿಂತಕರು ಸೇರಿದಂತೆ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ಐದುನೂರು ಜನರು ತೆರಳಲಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕೃಷ್ಣರಾಜು, ದಸಂಸ (ಅಂಬೇಡ್ಕರ್ ವಾದ) ಸಿದ್ದರಾಜು, ತಾಲ್ಲೂಕು ಅಧ್ಯಕ್ಷರಾದ ಕೃಷ್ಣಯ್ಯ, ಕಾಳಸ್ವಾಮಿ, ರಮಾಭಾಯಿ ಮಹಾಸಭಾ ಅಧ್ಯಕ್ಷೆ ಪುಷ್ಪ ಮರಿಸ್ವಾಮಿ ಹಾಜರಿದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ