ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಂತ್ರಾಲಯ ಶ್ರೀ ಗಳು!

ರಾಯಚೂರು : ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.ಈ ಘಟನೆಗೆ ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದ (Guru Raghavendra Swamy Mutt) ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subudhendra Theertha Swami) ವಿಷಾಧಿಸಿದ್ದಾರೆ.
ಶಿವಮೊಗ್ಗ, ಬೀದರ್‌ನಲ್ಲಿ ಸಿಇಟಿ ಪರೀಕ್ಷೆ (CET Exam) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಅಕ್ಷರಶಃ ನಾವು ತೀವ್ರವಾಗಿ ಖಂಡಿಸುತ್ತೇವೆ. ಅಲ್ಲದೇ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಅವರವರ ಧರ್ಮವನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶ ಹಾಗೂ ಅಧಿಕಾರವಿದೆ. ಸಂವಿಧಾನದ ಬಗ್ಗೆ ಒಂದೆಡೆ ಮಾತನಾಡುವುದು, ಇನ್ನೊಂದೆಡೆ ಸ್ವಾತಂತ್ರ‍್ಯವನ್ನು ಹರಣ ಮಾಡುವಂತಹ ದ್ವಂದ್ವ ನಿಲುವು ಅತ್ಯಂತ ಖಂಡನೀಯ.
ವಿಪ್ರ ಸಮಾಜ ಮಾತ್ರವಲ್ಲ, ಯಾವುದೇ ಸಮುದಾಯದ ವಿಚಾರ ಬಂದಾಗ ಈ ರೀತಿಯಾದ ಧರ್ಮ-ವಿರೋಧಿ ಚಟುವಟಿಕೆಗಳು ಅತ್ಯಂತ ಅಸಹ್ಯ, ಹೇಯವಾಗಿರುವಂತವು ಎಂದು ಘಟನೆ ಖಂಡಿಸಿದ್ದಾರೆ.ಈ ಅನ್ಯಾಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಘಟನೆಗಳು ಮುಂದೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವರದಿ : ವಿಶ್ವನಾಥ್ ಸಾಹುಕಾರ್ tv8kannada ರಾಯಚೂರು