ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ನೀಡಲಿ: ಕೆ.ಎಸ್. ರೇವಣ್ಣ

ಚಾಮರಾಜನಗರ: ಏ.23: ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಏ.24 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿ ಎಂದು ರಾಷ್ಟ್ರೀಯ ಹಿಂದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ರೇವಣ್ಣ ಕೆರೆಹಳ್ಳಿ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ಸಭೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದಕ್ಕೆ ಸ್ವಾಗತಾರ್ಹ. ಆ ಸಚಿವ ಸಂಪುಟದ ಸಭೆಯಲ್ಲಿ ಇನ್ನು ಹೆಚ್ಚಿನ ಮೂಲಸೌಕರ್ಯಗಳನ್ನು ನಮ್ಮ ಜಿಲ್ಲೆಗೆ ಒದಗಿಸಬೇಕು, ನಮ್ಮ ಜಿಲ್ಲೆಗೆ ಅನೇಕ ಬಾರಿ ಮುಖ್ಯಮಂತ್ರಿಗಳಾಗಿ ಬಂದು ಹಿಂದುಳಿದ ಜಿಲ್ಲೆ ಎಂಬುದನ್ನು ಅಳಿಸಿದ್ದಾರೆ ಹಾಗೆಯೇ ಹೆಚ್ಚಿನ ಅನುದಾನಗಳನ್ನ ನೀಡುವುದರ ಜೊತೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಬೆಳವಣಿಗೆಗೆ ಸಹಕರಿಸಬೇಕು ಎಂದರು.ಅಲ್ಲದೆ ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದಲ್ಲಿ ವಿಶ್ವ ರತ್ನ, ವಿಶ್ವಜ್ಞಾನಿ, ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು, ಅಲ್ಲದೆ ಕಾಶ್ಮೀರದಲ್ಲಿ ಜನರ ಮೇಲೆ ನಡೆದ ಕೃತ್ಯವನ್ನು ರಾಷ್ಟ್ರೀಯ ಅಹಿಂದ ಸಂಘಟನೆಯು ಖಂಡಿಸುತ್ತದೆ ಎಂದರು. ಮುಖ್ಯಮಂತ್ರಿಗಳು 5 ವರ್ಷ ಪೂರ್ಣ ಪ್ರಮಾಣದ ಮುಖ್ಯಮಂತ್ರಿಗಳಾಗಿ ಮುಂದುವರಿಯುವ ಭರವಸೆ ನನಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಅಹಿಂದ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಮೂರ್ತಿ, ಜಿ. ಪಂ.ಮಾಜಿ ಅಧ್ಯಕ್ಷ ಕಾವೇರಿ ಶಿವಕುಮಾರ್, ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅಪ್ಸರ್ ಪಾಷಾ, ಜಿಲ್ಲಾ ಕಾನೂನು ಘಟಕ ಹಾಗೂ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಮಹೇಶ್,
ಚಾಮರಾಜನಗರ ತಾಲೂಕು ಅಧ್ಯಕ್ಷ ಬೀರೇಶ್, ಯಳಂದೂರು ಸೋಮಣ್ಣ ಇದ್ದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ನೀಡಲಿ: ಕೆ.ಎಸ್. ರೇವಣ್ಣ
ಚಾಮರಾಜನಗರ: ಏ.23: ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಏ.24 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿ ಎಂದು ರಾಷ್ಟ್ರೀಯ ಹಿಂದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ರೇವಣ್ಣ ಕೆರೆಹಳ್ಳಿ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ಸಭೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದಕ್ಕೆ ಸ್ವಾಗತಾರ್ಹ. ಆ ಸಚಿವ ಸಂಪುಟದ ಸಭೆಯಲ್ಲಿ ಇನ್ನು ಹೆಚ್ಚಿನ ಮೂಲಸೌಕರ್ಯಗಳನ್ನು ನಮ್ಮ ಜಿಲ್ಲೆಗೆ ಒದಗಿಸಬೇಕು, ನಮ್ಮ ಜಿಲ್ಲೆಗೆ ಅನೇಕ ಬಾರಿ ಮುಖ್ಯಮಂತ್ರಿಗಳಾಗಿ ಬಂದು ಹಿಂದುಳಿದ ಜಿಲ್ಲೆ ಎಂಬುದನ್ನು ಅಳಿಸಿದ್ದಾರೆ ಹಾಗೆಯೇ ಹೆಚ್ಚಿನ ಅನುದಾನಗಳನ್ನ ನೀಡುವುದರ ಜೊತೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಬೆಳವಣಿಗೆಗೆ ಸಹಕರಿಸಬೇಕು ಎಂದರು.ಅಲ್ಲದೆ ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದಲ್ಲಿ ವಿಶ್ವ ರತ್ನ, ವಿಶ್ವಜ್ಞಾನಿ, ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು, ಅಲ್ಲದೆ ಕಾಶ್ಮೀರದಲ್ಲಿ ಜನರ ಮೇಲೆ ನಡೆದ ಕೃತ್ಯವನ್ನು ರಾಷ್ಟ್ರೀಯ ಅಹಿಂದ ಸಂಘಟನೆಯು ಖಂಡಿಸುತ್ತದೆ ಎಂದರು. ಮುಖ್ಯಮಂತ್ರಿಗಳು ಐದು ವರ್ಷ ಪೂರ್ಣ ಪ್ರಮಾಣದ ಮುಖ್ಯಮಂತ್ರಿಗಳಾಗಿ ಮುಂದುವರಿಯುವ ಭರವಸೆ ನನಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಅಹಿಂದ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಮೂರ್ತಿ, ಜಿ. ಪಂ.ಮಾಜಿ ಅಧ್ಯಕ್ಷ ಕಾವೇರಿ ಶಿವಕುಮಾರ್, ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅಪ್ಸರ್ ಪಾಷಾ, ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ನಾಗಬಸವಣ್ಣ,ಜಿಲ್ಲಾ ಕಾನೂನು ಘಟಕ ಹಾಗೂ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಮಹೇಶ್,
ಚಾಮರಾಜನಗರ ತಾಲೂಕು ಅಧ್ಯಕ್ಷ ಬೀರೇಶ್ ಇದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ