ಮೂವರೂ ಕಾಶ್ಮೀರಿಗಳು “ಬಿಸ್ಮಿಲ್ಲಾ ಬಿಸ್ಮಿಲ್ಲಾ” “(ಬಿಸ್ಮಿಲ್ಲಾ Bismillah)” ಎಂದು ಘೋಷಣೆ ಕೂಗುತ್ತಾ ನನ್ನ ರಕ್ಷಣೆ ಮಾಡಿದರು : ಮೃತ ಮಂಜುನಾಥ್ ಪತ್ನಿ

ಕಾಶ್ಮೀರ : ಮೂವರೂ ಕಾಶ್ಮೀರಿಗಳು ಬಿಸ್ಮಿಲ್ಲಾ ಬಿಸ್ಮಿಲ್ಲಾ ಎಂದು ಹೇಳುತ್ತ ಬಂದೇ ನನ್ನನ್ನು ರಕ್ಷಣೆ ಮಾಡಿದರು ಎಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಅವರ ಪತ್ನಿ ಹೇಳಿದ್ದಾರೆ.
ನನ್ನ ಮಗ ಬೆಳಿಗ್ಗೆಯಿಂದ ಏನನ್ನೂ ತಿಂದಿರಲಿಲ್ಲ.
ಹೀಗಾಗಿ ನನ್ನ ಪತಿ ಅಂಗಡಿಯವನೊಂದಿಗೆ ಮಾತನಾಡುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದರು. ಅವರ ತಲೆಗೆ ಗುಂಡು ಬಿತ್ತು, ಮೂರರಿಂದ ನಾಲ್ಕು ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದರು. ನನ್ನ ಗಂಡನನ್ನು ಕೊಂದ ನಂತರ, ನಾನು ಅವರಲ್ಲಿ ಒಬ್ಬನನ್ನು ನನ್ನನ್ನೂ ಕೊಲ್ಲುವಂತೆ ಕೇಳಿದೆ. ಅವನು, ‘ನಹಿ ಮಾರೇಂಗೆ, ಮೋದಿ ಕೋ ಬೋಲ್ದೊ’ (ನಾವು ನಿನ್ನನ್ನು ಕೊಲ್ಲುವುದಿಲ್ಲ, ಪ್ರಧಾನಿ ಮೋದಿಗೆ ಹೇಳು) ಎಂದು ಹೇಳಿ ಹೊರಟುಹೋದನು. ದಾಳಿಯ ಸಮಯದಲ್ಲಿ ಯಾವುದೇ ಸೇನಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ಮೂವರು ಸ್ಥಳೀಯ ಕಾಶ್ಮೀರಿ ಪುರುಷರು “ಬಿಸ್ಮಿಲ್ಲಾ, ಬಿಸ್ಮಿಲ್ಲಾ” ಎಂದು ಘೋಷಣೆ ಕೂಗುತ್ತಾ ನನ್ನನ್ನು ರಕ್ಷಿಸಿದರು ಎಂದು ಪಲ್ಲವಿ ಹೇಳಿದರು. “ಅವರು ನನ್ನ ಸಹೋದರರಂತೆ” ಎಂದು ಪಲ್ಲವಿ ಹೇಳಿದರು.